ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಟಿಟಿ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಸಂಪಿಗೆಖಾನ್ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ಕಳಸ ಬಾಳೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಂಪಿಗೆಖಾನ್ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿದೆ.

ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಆಗಮಿಸಿದ್ದ ಪ್ರವಾಸಿಗರು ಹೊರನಾಡಿನಿಂದ ಬೆಂಗಳೂರಿಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ.
ಟಿಟಿ ವಾಹನದಲ್ಲಿದ್ದ 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ಕಳಸ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



