November 6, 2026
;
rain 1

 

 

ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಶುರುವಾಗಿದೆ. ಅದರ ಪರಿಣಾಮವಾಗಿ, ರಾಜ್ಯದ ಹಲವೆಡೆ ಅಕ್ಟೋಬರ್  15ರಿಂದ 20ವರೆಗೆ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಎಚ್ಚರಿಸಿದೆ.  ಕಳೆದೊಂದು ವಾರದಿಂದ ಅಲ್ಪಸ್ವಲ್ಪ ಮಳೆಯಾಗುತ್ತಿದ್ದ ಬೆಂಗಳೂರಿನಲ್ಲಿ ಇಂದು ಬೆಳಗಿನ ಜಾವದಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗಬಹುದು ಎಂದು ತಿಳಿಸಿದೆ.  ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಅಕ್ಟೋಬರ್ 20 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಸಿ ಎಸ್ ಪಾಟೀಲ್ ಹೇಳಿದ್ದಾರೆ.

 

 

Leave a Reply

Your email address will not be published. Required fields are marked *