November 6, 2026
;
slide 2

 

 

ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ಬಳಿಕ ಎಚ್ಚೆತ್ತ ಕರ್ನಾಟಕ ರಾಜ್ಯ ಸರ್ಕಾರ  ಮಲೆನಾಡು ಭಾಗದ ಅಪಾಯಕಾರಿ ಸ್ಥಳಗಳ ಪಟ್ಟಿ ನೀಡುವಂತೆ ಕೇಳಿತ್ತು. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಕೆಲ ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ವರದಿ ಕಳುಹಿಸಿತ್ತು. ಇದಾದ ಬಳಿಕ ಆಗಸ್ಟ್​ನಲ್ಲಿ ಚಂದ್ರದ್ರೋಣ ಪರ್ವತಗಳ ಸಾಲಿನ ಕವಿಕಲ್ ಗಂಡಿ, ಮುಳ್ಳಯ್ಯನಗಿರಿ ಮಾರ್ಗ, ದತ್ತಪೀಠ ಸೇರಿದಂತೆ ಅನೇಕ ಕಡೆಗಳಲ್ಲಿ ಜಿಯೋಲಾಜಿಕಲ್ ಸರ್ವೇ ಆಫ್​ ಇಂಡಿಯಾ ತಂಡ   ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇದೀಗ ಜಿಯೋಲಾಜಿಕಲ್ ಸರ್ವೇ ತಂಡ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ. ಹಾಗೂ ಹಲವು ನಿಯಮ, ಕಟ್ಟುಪಾಡುಗಳನ್ನು ಅನುಸರಿಸಲು ಸೂಚಿಸಿದೆ.

ಅವೈಜ್ಞಾನಿಕ ಕಾಮಗಾರಿ, ವಾಹನಗಳ ದಟ್ಟನೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತವಾಗುತ್ತಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು, ಚಾರ್ಮಾಡಿ ಘಾಟ್ ಪ್ರದೇಶಗಳನ್ನು ಅಪಾಯಕಾರಿ ಸ್ಥಳಗಳೆಂದು ಗುರುತಿಸಿದೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟನೆ ನಿಲ್ಲಿಸುವಂತೆ ಜಿಯೋಲಾಜಿಕಲ್ ಸರ್ವೇ ತಂಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.  ಅವೈಜ್ಞಾನಿಕ ಕಾಮಗಾರಿಯಿಂದಲೇ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಹೆಚ್ಚಿನ ಭೂ ಕುಸಿತ ಉಂಟಾಗುತ್ತಿದೆ ಎಂಬ ಅಂಶ ಪತ್ತೆಯಾಗಿದೆ.

ಜಿಯೋಲಾಜಿಕಲ್ ಸರ್ವೇ ಟೀಮ್, ಚಿಕ್ಕಮಗಳೂರು ಜಿಲ್ಲೆಯ ಅನೇಕ ಅಪಾಯಕಾರಿ ಸ್ಥಳಗಳ ವರದಿ ನೀಡಿದೆ. ಪಶ್ಚಿಮ ಘಟ್ಟಗಳ ಸಾಲು ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ, ಭೂ ಕುಸಿತಕ್ಕೆ ಕಾರಣ ನೀಡಿದೆ.  ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ, ಭೂ ಕುಸಿತವಾಗುತ್ತಿದೆ. ಅತಿಹೆಚ್ಚು ಕಾಮಗಾರಿಗಳಿಂದ ಪಶ್ಚಿಮ ಘಟ್ಟಗಳ ಸಾಲಿಗೆ ಹಾನಿಯಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್​ಗೆ ವರದಿ ಸಲ್ಲಿಸಲಾಗಿದೆ.

 

 

Leave a Reply

Your email address will not be published. Required fields are marked *