ಮೂಡಿಗೆರೆಯ ಕೆಂಪೇಗೌಡ ಒಕ್ಕಲಿಗರ ವೇದಿಕೆಯಿಂದ ಇತ್ತೀಚೆಗೆ ನಿಧನರಾದ ನಮ್ಮ ದೇಶದ ಖ್ಯಾತ ಉದ್ಯಮಿಗಳಾದ ಶ್ರೀಯುತ ರತನ್ ಟಾಟಾರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸೋಮವಾರ ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ದಿವಂಗತ ರತನ್ ಟಾಟಾ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮುಖಾಂತರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಂಘದ ಹಿರಿಯ ಸಲಹೆಗಾರರು, ಒಕ್ಕಲಿಗ ಸಮಾಜ ಮುಖಂಡರು, ಮಾಜಿ ಯೋಧರುಗಳನು ಭಾಗವಹಿಸಿ ಅಗಲಿದ ಚೇತನಕ್ಕೆ ತಮ್ಮ ಗೌರವ ನಮನ ಸಲ್ಲಿಸಿದರು.



