November 6, 2026
;
IMG-20241015-WA0069

 

 

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ ಮಾಡಲಾಗಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಿಸಿದ್ದಾರೆ.

ಮಹಾರಾಷ್ಟ್ರದಲ್ಲಿ 1 ಹಂತದಲ್ಲಿ 288 ಕ್ಷೇತ್ರಗಳಿಗೆ ನವೆಂಬರ್ 20 ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದರೆ, ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ 81 ಕ್ಷೇತ್ರಗಳಿಗೆ ನವೆಂಬರ್ 13 ರಂದು ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನ ನವೆಂಬರ್ 20 ರಂದು ನಿಗದಿಯಾಗಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶಾಸಕರಿಂದ ತೆರವುಗೊಂಡ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. ನ.13 ರಂದು ಮತದಾನ ನಡೆಯಲಿದೆ, ನವೆಂಬರ್ 23 ರಂದು ಮತೆಣಿಕೆ ನಡೆಯಲಿದೆ.

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಶಿಗ್ಗಾಂವಿ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾವೇರಿಯಿಂದ, ಚನ್ನಪಟ್ಟಣ ಶಾಸಕರಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ, ಸಂಡೂರು ಶಾಸಕ ತುಕಾರಾಂ ಬಳ್ಳಾರಿ ಕ್ಷೇತ್ರದಿಂದ ಲೋಕಸಭೆಗೆ ಪ್ರವೇಶಿಸಿದ್ದಾರೆ.

 

 

Leave a Reply

Your email address will not be published. Required fields are marked *