November 6, 2026
;
IMG-20241016-WA0177_copy_883x496

 

 

ಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ವಹಿಸುವಂತೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಲಜೀವನ್ ಮಿಷನ್ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಯಾಗಿದ್ದು, ಭಾರತದ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ವೈಯಕ್ತಿಕವಾಗಿ ನಲ್ಲಿ ಸಂಪರ್ಕಗಳ ಮೂಲಕ ಸುರಕ್ಷಿತವಾಗಿ ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿದೆ ಎಂದರು.

ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ಮಾತನಾಡಿ ಕಡೂರಿನಿಂದ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಣ್ಣಿನ ಹಾಗೂ ಇತರೆ ಸಸಿಗಳನ್ನು ನೆಟ್ಟು ಸರಿಯಾಗಿ ನಿರ್ವಹಣೆ ಮಾಡಬೇಕೆಂದರು.

ಉದ್ಯೋಗ ಅರಸಿ ಜಿಲ್ಲೆಗೆ ಬರುವ ಕಾರ್ಖಾನೆ ಹಾಗೂ ಕಾಫಿ ಎಸ್ಟೇಟ್‌ಗಳಲ್ಲಿ ಕೆಲಸ ನಿರ್ವಹಿಸುವ ಹೊರ ರಾಜ್ಯದ ಕಾರ್ಮಿಕರ ಮಾಹಿತಿಯಲ್ಲಿ ಗೊಂದಲವಿದ್ದಲ್ಲಿ ನಿರ್ಲಕ್ಷಿಸದೆ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಒಡೆದು ಹಾಕಲಾಗಿರುವ ಮನೆಗಳ ಫಲಾನುಭವಿಗಳಿಗೆ ಶೀಘ್ರ ಪರಿಹಾರ ನೀಡಬೇಕು, ಹಾಗೂ ಬೇಲೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕ್ರಮವಹಿಸಬೇಕು ಇಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿಎನ್ ಮಾತನಾಡಿ ಬೇಲೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಯೋಜನಾ ವರದಿ ವಿವರವನ್ನು ಸಲ್ಲಿಸಲಾಗಿದೆ ಎಂದರು.

ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಮಾತನಾಡಿ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಆಸ್ಪತ್ರೆಗಳಿಗೆ 9 ಆಂಬುಲೆನ್ಸ್ ಅವಶ್ಯಕತೆ ಇದ್ದು, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿ ಕೊಡಲು ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್ ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ನಗರ ಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಬೀರೂರು ಪುರಸಭೆ ಅಧ್ಯಕ್ಷೆ ವನಿತಾ ಹಾಜರಿದ್ದರು.

 

 

Leave a Reply

Your email address will not be published. Required fields are marked *