ಕಟ್ಟಡ ಕಾರ್ಮಿಕರ ಬದುಕಿಗೆ ಅಗತ್ಯ ನೆರವು ನೀಡಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
ಚಿಕ್ಕಮಗಳೂರು ಕಾರ್ಮಿಕ ಭವನದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಉಚಿತ ಸಲಕರಣೆಗಳ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೈದ್ಯಕೀಯ ಅಪಘಾತ ಪರಿಹಾರ, ಪಿಂಚಣಿ ವ್ಯವಸ್ಥೆ, ವಿವಾಹಕ್ಕೆ ಸಹಾಯಧನ, ಶ್ರಮಿಕರಿಗೆ ಸಂಚಾರಿ ಆರೋಗ್ಯ ತಪಾಸಣೆ ಮಾಡುವ ಸೌಲಭ್ಯದ ಮೂಲಕ ಬದುಕಿಗೆ ಸಹಾಯವಾಗುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ ಶಿವಾನಂದಸ್ವಾಮಿ ಮಾತನಾಡಿ ಸರ್ಕಾರದ ಸೌಲಭ್ಯ ಪಡೆದವರು ಕೊಂಕು ಮಾತನಾಡದೆ ಕೃತಜ್ಞತಾ ಮನೋಭಾವ ಬೆಳೆಸಿಕೊಳ್ಳಬೇಕು, ಇದು ಆಗದ ಹೊರತು ಜಗತ್ತಿನಲ್ಲಿ ಒಳ್ಳೆಯವರಾಗಿ ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಇಲಾಖೆಯ ಆಯುಕ್ತ ರವಿಕುಮಾರ್ ಮಾತನಾಡಿದರು. ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿ ಸುರೇಶ್ ಭಾಗವಹಿಸಿದ್ದರು. ಪ್ರಭಾಕರ್ ಸ್ವಾಗತಿಸಿದರು.


