November 6, 2026
;
kaadane4

 

 

ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ. ಸಕಲೇಶಪುರ ತಾಲ್ಲೂಕಿನ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ನಡೆದಿದೆ.

ಕಾಡಾನೆಗೆ ಅಂದಾಜು 25 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಆನೆ ಆಹಾರ ಅರಸಿ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಬಂದಿದೆ. ಈ ವೇಳೆ ಅಲ್ಲೇ ಹಾದು ಹೋಗಿರುವ ವಿದ್ಯುತ್ ತಂತಿ ಆನೆಗೆ ತಾಕಿದ್ದು, ಸ್ಥಳದಲ್ಲೇ ಸಾವನ್ನಪ್ಪಿದೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Leave a Reply

Your email address will not be published. Required fields are marked *