valmiki ckm

 

 

ರಾಮಾಯಣ ಮಹಾಕಾವ್ಯದ ಕರ್ತೃ ಶ್ರೀ ಮಹರ್ಷಿ ವಾಲ್ಮೀಕಿಯವರ ತತ್ವ ಸಿದ್ಧಾಂತಗಳು ಸದಾ ಜೀವಂತ ಎಂದು ಚಿಕ್ಕಮಗಳೂರು  ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತದ ಮಹಾಕಾವ್ಯಗಳಲ್ಲಿ ರಾಮಾಯಣವು ಮಹತ್ವ ಪೂರ್ಣ ಗ್ರಂಥವಾಗಿದೆ ಯುಗ ಪುರುಷ ಶ್ರೀ ರಾಮನ ಆದರ್ಶ, ಜೀವನ ಶೈಲಿ, ವ್ಯಕ್ತಿತ್ವ ಹಾಗೂ ಅವರ ದೈವ ಸ್ವರೂಪವನ್ನು ಕಾವ್ಯದ ಮೂಲಕ ಅದ್ಭುತವಾಗಿ ವರ್ಣಿಸಲಾಗಿದೆ ಇಂದಿಗೂ ರಾಮ ರಾಜ್ಯದ ಪರಿಕಲ್ಪನೆಯನ್ನು ಪ್ರತಿಯೊಬ್ಬರು ಮನದಟ್ಟು ಮಾಡಿಕೊಳ್ಳುತ್ತಾರೆ ಇಂತಹ ಮಹತ್ವ ಪೂರ್ಣ ಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರ ಬದುಕು ಪ್ರೇರಣೀಯವಾದುದು ಎಂದರು.

ಮಹರ್ಷಿ ವಾಲ್ಮೀಕಿ ಕೇವಲ ಯಾವುದೇ ಒಂದು ವರ್ಗಕ್ಕೆ ಸೀಮಿತರಾದವರಲ್ಲ ಶ್ರೀ ರಾಮನ ವ್ಯಕ್ತಿತ್ವ ಸಾರುವ ಅವರ ರಾಮಾಯಣ ಮಾಹಾ ಕಾವ್ಯವು ವಿಶ್ವಾದ್ಯಂತ ಮನ್ನಣೆ ಪಡೆದು ಇದರ ಸಾರವನ್ನು ತಿಳಿಯುವ ಪ್ರತಿಯೊಬ್ಬ ವ್ಯಕ್ತಿಯ ಬದುಕು ಬದಲಾಯಿಸುವ ಗ್ರಂಥ ಇದಾಗಿದೆ. ಸಮಾಜದಲ್ಲಿ ಸತ್ಯ, ನಿಷ್ಠೆ, ಸಮಾನತೆಯ ಸಹಬಾಳ್ವೆ, ಪರೋಪಕಾರಿಯಾಗಿ ಹಾಗೂ ಧರ್ಮ ಶ್ರದ್ಧೆಯಿಂದ ಬದುಕಲು ಕಾವ್ಯವು ಸಹಕಾರಿಯಾಗಿದೆ.

ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರಂತಹ ಮಹಾನ್ ವ್ಯಕ್ತಿಗಳು ಸಮಾಜದ ಅನಿಷ್ಠ ಪದ್ಧತಿಯನ್ನು ದೂರಮಾಡಿ ಸಮಾನತೆಯಿಂದ ಬದುಕುವ ಮಾರ್ಗವನ್ನು ಸಾರಿದ್ದಾರೆ ಇವರ ವಿಚಾರದಾಗಳು ಸಧಾ ಜೀವಂತವಾದುದು ವ್ಯಕ್ತಿ ಪೂಜೆಗಿಂತ ಅವರ ವ್ಯಕ್ತಿತ್ವ ಹಾಗೂ ತತ್ವಗಳನ್ನು ಅನುಸರಿಸುವುದರಿಂದ ಉತ್ತಮ ನಾಗರಿಕರಾಗಲು ಸಾಧ್ಯ ಎಂದ ಅವರು ಮಹರ್ಷಿ ವಾಲ್ಮೀಕಿ ರಾಮಾಯಣದ ತತ್ವ ಸಿದ್ಧಾಂತಗಳನ್ನು ತಿಳಿದು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದರು.

ನಗರ ಸಭೆ ಅಧ್ಯಕ್ಷೇ ಸುಜಾತ ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಕಾರ್ಯಕ್ರಮದ ಅಂಗವಾಗಿ ವಿವಿಧ ಕಲಾ ತಂಡಗಳೊಂದಿಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ನಗರದ ತಾಲ್ಲೂಕು ಕಚೇರಿಯಿಂದ ಕುವೆಂಪು ಕಲಾ ಮಂದಿರದ ವರೆಗೆ ಆಯೋಜಿಸಿದ್ದ ಮೆರವಣಿಗೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಚಾಲನೆ ನೀಡಿದರು ಮೆರವಣಿಗೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹೆ.ಎಸ್. ಕೀರ್ತನಾ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ತಹಶೀಲ್ದಾರ್ ಡಾ.ಸುಮಂತ್ , ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷರಾದ ಡಾ. ಅಂಶುಮಂತ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಯಾಜ್ ಅಹಮದ್,ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಶಿವಾನಂದಸ್ವಾಮಿ, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಜಿ.ಕೆ. ಭೀಮಪ್ಪ, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಯುವಕ ಸಂಘದ ಅಧ್ಯಕ್ಷ ಜಗದೀಶ್ ಕೋಟೆ ಹಾಗೂ ಡಿಎಸ್‌ಎಸ್ ಮುಖಂಡರುಗಳಾದ ಕೆ.ಟಿ ರಾಧಕೃಷ್ಣ, ಹುಣಸೇಮಕ್ಕಿ ಲಕ್ಷ್ಮಣ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ