September 12, 2026
;
m t laxmangowda

 

 

ಮೂಡಿಗೆರೆ ತಾಲ್ಲೂಕು ಮಾಕೋನಹಳ್ಳಿ ಗ್ರಾಮದ ಹಿರಿಯ ಕಾಫಿ ಬೆಳೆಗಾರರಾಗಿದ್ದ ಎಂ.ಟಿ. ಲಕ್ಷ್ಮಣಗೌಡ (98 ವರ್ಷ) ನಿಧನ ಹೊಂದಿದ್ದಾರೆ. (ಮೂಡಿಗೆರೆ ಬಿಜೆಪಿ ಮಾಜಿ ಅಧ್ಯಕ್ಷ, ಕಾಫಿ ಮಂಡಳಿ ಮಾಜಿ ಸದಸ್ಯ ಎಂ.ಎಲ್. ಕಲ್ಲೇಶ್ ಅವರ ತಂದೆ)

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮಣಗೌಡರು ಮಂಗಳವಾರ ಸಂಜೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಲಕ್ಷ್ಮಣಗೌಡರು ಮಲೆನಾಡಿನ ಹಿರಿಯ ಕಾಫಿ ಬೆಳೆಗಾರರಲ್ಲಿ ಒಬ್ಬರಾಗಿದ್ದರು. ಸ್ವಾತಂತ್ರ್ಯ ಚಳುವಳಿಯಲ್ಲಿಯೂ ಇವರು ಭಾಗವಹಿಸಿದ್ದರು. ಮೂಡಿಗೆರೆ ತಾಲ್ಲೂಕು ಆಡಳಿತದಿಂದ, ವಿವಿಧ ಸಂಘಸಂಸ್ಥೆಗಳಿಂದ ಗೌರವ ಸನ್ಮಾನಕ್ಕೆ ಪಾತ್ರರಾಗಿದ್ದರು.

ಲಕ್ಷ್ಮಣಗೌಡರು ಮಾಕೋನಹಳ್ಳಿ ಕುಟುಂಬದಲ್ಲಿ ಅತ್ಯಂತ ಹಿರಿಯರಾಗಿದ್ದರು.  ಮೃತರು ಪತ್ನಿ, ಮೂವರು ಪುತ್ರರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಮಧ್ಯಾಹ್ನ 2.00 ಗಂಟೆಗೆ ಸ್ವಗ್ರಾಮ ಮಾಕೋನಹಳ್ಳಿಯಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಲಕ್ಷ್ಮಣಗೌಡರ ನಿಧನಕ್ಕೆ ಮೂಡಿಗೆರೆ ಬೆಳೆಗಾರರ ಸಂಘ ಮತ್ತು ಕರ್ನಾಟಕ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು, ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ಸಹಕಾರ ಸಂಘದ ಅಧ್ಯಕ್ಷರು, ಸದಸ್ಯರು ತಮ್ಮ ಸಂತಾಪ ಸೂಚಿಸಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;