ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಂಡರ್ 17 ಬಾಲಕರ ವಿಭಾಗದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ್ದ ಮೂಡಿಗೆರೆ ತಾಲೂಕಿನ, ಚಿನ್ನಿಗ ಸರ್ಕಾರಿ ಪ್ರೌಢಶಾಲಾ ತಂಡ ಪ್ರಥಮ ಸ್ಥಾನ ಪಡೆದಿದೆ.
ಶಿವಮೊಗ್ಗ ಜಿಲ್ಲೆಯ, ಸೊರಬ ತಾಲೂಕಿನ, ಜಡೆ ಗ್ರಾಮದಲ್ಲಿ ನಡೆದ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯದಲ್ಲಿ ಬೆಳಗಾವಿ ತಂಡದ ವಿರುದ್ಧ ನೇರ ಸೆಟ್ಟುಗಳಿಂದ ಜಯಗಳಿಸಿದ ಚಿನ್ನಿಗ ತಂಡ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದಲ್ಲಿ ಆಡುವ ಅರ್ಹತೆಯನ್ನು ಗಳಿಸಿರುತ್ತದೆ.
ತನ್ನ ಸಾಧನೆಯ ಮೂಲಕ ಶಾಲೆಗೆ, ತಾಲ್ಲೂಕಿ ಮತ್ತು ಜಿಲ್ಲೆಗೆ ಹೆಮ್ಮೆ ತಂದಿರುವ ತಂಡಕ್ಕೆ ಶಾಲಾ ಶಿಕ್ಷಕರು, ಆಡಳಿತ ಮಂಡಳಿ ಮತ್ತು ಚಿನ್ನಿಗ ಜನ್ನಾಪುರ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.



