building collapse

 

 

ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೆ 8 ಮೃತದೇಹಗಳು ಪತ್ತೆಯಾಗಿವೆ.

ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಜನರನ್ನು ರಕ್ಷಿಸಲಾಗಿದ್ದು, ಆರು ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ಮಧ್ಯಾಹ್ನ 3:40ರ ಸುಮಾರಿಗೆ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.

ಮಾಲೀಕ, ಗುತ್ತಿಗೆದಾರ ಬಂಧನ

ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಕಂಟ್ರಾಕ್ಟರ್ ಸೇರಿದ್ದಾರೆ ಎನ್ನಲಾಗಿದೆ.  ಬಂಧಿತರನ್ನು ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಕಾಂಟ್ರಾಕ್ಟರ್ ಮುನಿಯಪ್ಪ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ