ದಿನಾಂಕ 31.10.2024 ರಿಂದ 03.11.2024 ರವರೆಗೆ ಚಿಕ್ಕಮಗಳೂರು ತಾಲ್ಲೂಕಿನ ಬಿಂಡಿಗ ಗ್ರಾಮದಲ್ಲಿ ನಡೆಯಲಿರುವ ಶ್ರೀ ದೇವಿರಮ್ಮನವರ ದೀಪೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಭದ್ರತಾ ದೃಷ್ಠಿಯಿಂದ ಪೊಲೀಸ್ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು ಎಸ್ಪಿ ಡಾ. ವಿಕ್ರಮ ಅಮಟೆ ಯವರು ತಮ್ಮ ಇಲಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸ್ವತಃ ದೇವಿರಮ್ಮ ಬೆಟ್ಟಕ್ಕೆ ಚಾರಣ ನಡೆಸಿ ಪ್ರವಾಸಿಗರು ಸಾಗುವ ಬೆಟ್ಟದ ಹಾದಿಯನ್ನು ಪರಿಶೀಲನೆ ನಡೆಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಪೊಲೀಸ್ ಬಂದೋಬಸ್ತ್ ನಿಯೋಜನೆ, ಬೆಟ್ಟ ಹತ್ತಲು ಭಕ್ತಾದಿಗಳು ನಡೆದುಕೊಂಡು ಹೋಗುವ ದಾರಿ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ನೂಕು ನುಗ್ಗಲು ಆಗದಂತೆ ಜನ ಸಂದಣಿ ನಿಯಂತ್ರಣ, ಆ್ಯಂಬುಲೆನ್ಸ್ ನಿಯೋಜನೆ, ಸುರಕ್ಷತಾ ಕ್ರಮಗಳು ಹಾಗೂ ಇತರೇ ಸಿದ್ಧತೆಗಳನ್ನು ಪರಿಶೀಲಿಸಿ, ಪೊಲೀಸ್ ಅಧೀಕ್ಷಕರವರು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.




