kisor

 

 

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭಂಡಾರಿ  ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಕಿಶೋರ್ ಕುಮಾರ್ ಅವರು 3,654 ಮತ ಪಡೆದು ಗೆಲುವಿನ ನಗೆ ಬೀರಿದ್ದು, 1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು.

ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿದರು.  87 ಮತಗಳು ತಿರಸ್ಕೃತವಾಗಿದ್ದವು ಎನ್ನಲಾಗಿದೆ.

ಹಾಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಕೋಟಾ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು.

ಈ ಕ್ಷೇತ್ರದಲ್ಲಿ 5,906 ಮತಗಳು ಚಲಾವಣೆಯಾಗಿದ್ದು, 5,819 ಸಿಂಧು ಮತಗಳಿದ್ದವು‌.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ