thayi magalu

 

 

ಇತ್ತೀಚೆಗೆ  ಕೇರಳದ ಕ್ಯಾಲಿಕೆಟ್ ನ ಕೃಷ್ಣ ಮೆನೋನ್ ಒಳ ಕ್ರೀಡಾಂಗಣದಲ್ಲಿ ಇಂಟರ್ ನ್ಯಾಷನಲ್ ಶೋಟೋ ಕಾನ್ ಅಕಾಡೆಮಿ ಆಫ್ ಇಂಡಿಯಾ  ಆಯೋಜಿಸಿದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಮೂಡಿಗೆರೆಯ   ಇಂಟರ್ನ್ಯಾಷನಲ್ ಅಕಾಡೆಮಿ ಆಫ್ ಟ್ರೆಡಿಷನಲ್ ಮಾರ್ಷಲ್ ಆರ್ಟ್ಸ್ ಕರಾಟೆ ಸಂಸ್ಥೆಯ ಮುಖ್ಯ ಶಿಕ್ಷಕರಾದ ಸೆನ್ ಸಾಯ್ ಬೇಬಿಲತ ಇವರು ಬ್ಲಾಕ್ ಬೆಲ್ಟ್  III ಡಾನ್ 25 ವರ್ಷ ಮೇಲ್ಪಟ್ಟ ವಯೋಮಿತಿಯ ವೈಯಕ್ತಿಕ ಕಥಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಇವರ ಮಗಳಾದ ಕರಾಟೆ ಶಿಕ್ಷಕಿ ಬೆಥನಿ ಶಾಲೆಯ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆನ್ಸಾಯ್ ಅಶ್ವಿನಿಚಂದ್ರ  ಇವರು ಬ್ಲಾಕ್ ಬೆಲ್ಟ್II ಡಾನ್  12 ರಿಂದ 15  ವರ್ಷ ವಯೋಮಿತಿಯ ವೈಯಕ್ತಿಕ ಕಥಾ ವಿಭಾಗದಲ್ಲಿ  ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಒಂದೇ ದಿನ ತಾಯಿ ಮಗಳು ಬೇರೆ ಬೇರೆ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕಗಳನ್ನು ಪಡೆದು ರಾಷ್ಟ್ರಮಟ್ಟದಲ್ಲಿ ಜಯಗಳಿಸಿದ್ದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆ ಅಪರೂಪದ್ದಾಗಿದ್ದು ಜೊತೆಗೆ ಇವರ ಕರಾಟೆ ಶಾಲೆಯ ವಿದ್ಯಾರ್ಥಿಗಳು ಸಹ ಹಲವು ಪದಕಗಳನ್ನು ಗೆದ್ದು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ