September 12, 2026
;
thammayya

 

 

ಚಿಕ್ಕಮಗಳೂರು ತಾಲ್ಲೂಕಿನ ಈಶ್ವರಹಳ್ಳಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಬಾಗೀನ ಅರ್ಪಿಸಿದರು.

ಬಾಗೀನ  ಅರ್ಪಿಸಿ ಮಾತನಾಡಿದ ಅವರು ; ಚಿಕ್ಕಮಗಳೂರು ಕ್ಷೇತ್ರದ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸ್ವಲ್ಪ ಸಮಯ ಬೇಕಾಗುತ್ತದೆ. ಕಳೆದ 20 ವರ್ಷದಲ್ಲಿ ಹಾಳು ಮಾಡಿರುವುದನ್ನು ನಾವು 18 ತಿಂಗಳಲ್ಲಿ ಸರಿಪಡಿಸಲಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕುಂಟಿತವಾಗಿಲ್ಲ. ಐದೂ ಗ್ಯಾರಂಟಿಗಳಿoದ ಜನ ಖುಷಿಯಾಗಿದ್ದಾರೆ. ವಿರೋಧ ಪಕ್ಷಗಳಿಗೆ ಇದನ್ನು ಸಹಿಸಲು ಆಗುತ್ತಿಲ್ಲ ಆ ಕಾರಣಕ್ಕೆ ಸ್ಥಳೀಯ ರಾಜ್ಯ ಮಟ್ಟದ ರಾಜಕಾರಣಿಯೊಬ್ಬರು ಅಪಪ್ರಚಾರ ಮಾಡಿಕೊಂಡು ತಿರುಗುತ್ತಿದ್ದಾರೆಂದು ಆರೋಪಿಸಿದರು.

ಕ್ಷೇತ್ರದ 34 ಗ್ರಾ.ಪಂ.ಗೆ 25ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿಸಲಾಗಿದೆ. ಮುಂದಿನ ದಿನದಲ್ಲಿ ನಗರದಲ್ಲೂ ರಸ್ತೆಗಳ ದುರಸ್ಥಿ ಕಾರ್ಯ ನಡೆಯಲಿದೆ. ಯುಜಿಡಿ ಮತ್ತು ಅಮೃತ್ ಕಾಮಗಾರಿಗಳಿಂದಾಗಿ ರಸ್ತೆಗಳು ಹದಗೆಟ್ಟಿವೆ ಅದನ್ನು ಸರಿಪಡಿಸಲು ನಮಗೊಂದಿಷ್ಟು ಸಮಯ ಬೇಕಾಗುತ್ತದೆ.ತಮ್ಮ ಕೆಟ್ಟ ಆಡಳಿತವನ್ನು ಮರೆಮಾಡಿ ಶಾಸಕ ಹೆಚ್ ಡಿ ತಮ್ಮಯ್ಯ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ ಎಂದು ದೂರುವವರು ತಮ್ಮ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಯಾರ ಹೆಸರನ್ನು ಹೇಳದೆ ಕುಟುಕಿದರು.

ಪ್ರತಿ ಗ್ರಾ.ಪಂ.ಗಳಿಗೆ 30 ರಿಂದ 40 ಲಕ್ಷ ರೂ.ನಂತೆ ಒಟ್ಟು 15 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ಬಿಡುಗಡೆ ಮಾಡಿದ್ದಾರೆ. ಈಶ್ವರಹಳ್ಳಿ ಗ್ರಾ.ಪಂ. ಒಂದಕ್ಕೆ 2 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.

ನಮಗೆ ಇನ್ನೂ ಮೂರೂವರೆ ವರ್ಷ ಅವಧಿ ಇದೆ. ಅವರು ಯುಜಿಡಿ, ಅಮೃತ್ ಕಾಮಗಾರಿ ಮುಗಿಸಿಲ್ಲ. ಅದನ್ನು ಪೂರ್ಣಗೊಳಿಸುವ ಕೆಲಸವನ್ನೂ ನಾವು ಮಾಡೇ ಮಾಡುತ್ತೇವೆ. ಹಿಂದಿನ ಸರ್ಕಾರ 70 ಸಾವಿರ ಕೋಟಿ ರೂ. ಸಾಲ ಮಾಡಿ ನಮ್ಮ ಮೇಲೆ ಹೊರಿಸಿ ಹೋಗಿದ್ದಾರೆ ಅದನ್ನು ತೀರಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

ಎತ್ತಿನ ಹೊಳೆ ಯೋಜನೆಯಲ್ಲಿ ದೇವನೂರು, ಮಾಚೇನಹಳ್ಳಿ, ಬೆಳವಾಡಿ ಕೆರೆಗಳು ಇರಲಿಲ್ಲ. ಆದರೆ ಎತ್ತಿನ ಹೊಳೆ ಉದ್ಘಾಟನೆ ಸಂದರ್ಭದಲ್ಲಿ ಹಳೇಬೀಡು ಭಾಗದಲ್ಲಿ ಸ್ವಲ್ಪ ತೊಂದರೆ ಆದ ಕಾರಣ ನಮ್ಮೆಲ್ಲರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಳೇಬೀಡು ಕೆರೆಗೆ ನೀರು ಹರಿಸಲು ಒಪ್ಪಿದ ಪರಿಣಾಮ ಇಂದು ಕಳಸಾಪುರ, ಬೆಳವಾಡಿ ಕೆರೆಗಳು ತುಂಬಿ ಸಂವೃದ್ಧಿ ಆಯಿತು ಎಂದು ಹೇಳಿದರು.

ಕರಗಡ ಯೋಜನೆಯ ಕೆಲವು ಅಡೆತಡೆಗಳನ್ನು ನಿವಾರಿಸಿದ ಪರಿಣಾಮ ಇಂದು ತಿಮ್ಮಪ್ಪರಾಯನ ಕೆರೆ, ಈಶ್ವರಹಳ್ಳಿ ಕರೆ ಹಾಗೂ ಕಳಸಾಪುರ ಕೆರೆಗಳು ಭರ್ತಿಯಾಗಿದೆ. ಈ ಯೋಜನೆಗಾಗಿ ಹೋರಾಟ ಮಾಡಿದವರನ್ನೆಲ್ಲಾ ಈ ಸಂದರ್ಭದಲ್ಲಿ ನೆನೆಯುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿ.ಪo. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ, ಎಪಿಎಂಸಿ ಸಂಸ್ಕರಣಾ ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್,  ಬಗರ್‌ಹುಕ್ಕುಂ ಸಮಿತಿ ಸದಸ್ಯ ಕೆಂಗೇಗೌಡ, ಶಂಕರ್ ನಾಯಕ್, ಜಿ.ಪಂ. ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಯೋಗೀಶ್, ಅಚ್ಚುತ ರಾವ್, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಇದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;