ಚಿಕ್ಕಮಗಳೂರು ತಾಲ್ಲೂಕು ಆಲ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಶ್ರೀದೇವಿ ಕುಮಾರಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಶ್ರೀದೇವಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಎಇಇ ಚೇತನ್ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕೌಷಿಕ್, ಮಾಜಿ ಅಧ್ಯಕ್ಷ ರಾದ ಜಯಶೀಲಾ ಹಾಗು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.


