ಭ್ರಷ್ಟಾಚಾರ ದೇಶದ ಅತಿ ದೊಡ್ಡ ಪಿಡುಗಾಗಿದೆ. ಇದನ್ನು ನಿರ್ಮೂಲನೆ ಮಾಡುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಸಾರ್ವಜನಿಕರು ಲೋಕಾಯುಕ್ತ ಸಂಸ್ಥೆಯೊಂದಿಗೆ ಕೈ ಜೋಡಿಸಬೇಕೆಂದು ಲೋಕಾಯುಕ್ತ ಪೆÇಲೀಸ್ ನಿರೀಕ್ಷಕ ಮಲ್ಲಿಕಾರ್ಜುನ್ ಹೇಳಿದರು.
ಅವರು ಮಂಗಳವಾರ ಪಟ್ಟಣದ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಸಂಸ್ಥೆಯಿಂದ ಏರ್ಪಡಿಸಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಭ್ರಷ್ಟಾಚಾರದಿಂದ ನಮ್ಮ ದೇಶದ ಆರ್ಥಿಕ ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಅಡಚಣೆಯಾಗಿದೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಹೆಚ್ಚಾಗಿ ನಡೆಯಬೇಕಿದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರೀಕರೂ ಸಂಕಲ್ಪ ಮಾಡಿದಾಗ ಮಾತ್ರ ದೇಶ ಉನ್ನತ ಸ್ಥಿತಿಯಲ್ಲಿ ಸಾಗಲು ಸಾಧ್ಯವಿದೆ ಎಂದು ಹೇಳಿದರು.
ಬಳಿಕ ತಾಲೂಕು ಕಚೇರಿ ನೌಕರರಿಗೆ ಜೀವನದ ಎಲ್ಲಾ ಕ್ಷೇತ್ರದಲ್ಲಿ ಕಾನೂನಿಗೆ ಗೌರವ ನೀಡಬೇಕು. ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದಿಲ್ಲ. ಅಲ್ಲದೇ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುತ್ತೇವೆ. ವೈಯಕ್ತಿಕ ನಡವಳಿಯಲ್ಲಿ ನಿಷ್ಟೆ ಪ್ರದರ್ಶಿಸುತ್ತೇವೆಂದು ಪ್ರಮಾಣವಚನ ಬೋಧಿಸಿದರು.
ಲೋಕಾಯುಕ್ತ ಸಿಬ್ಬಂದಿ ಎಂ.ಪ್ರಸಾದ್, ರವಿಚಂದ್ರ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.



