ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪರ ಕೆಲಸ ಮಾಡಲು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ಕ್ಷೇತ್ರದ ವಿವಿಧ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಪರವಾಗಿ ಪ್ರಚಾರ ನಡೆಸಲು ರಾಜ್ಯದ ವಿವಿಧ ಭಾಗಗಳಿಂದ ನಾಯಕರುಗಳನ್ನು ನೇಮಕ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಿಂದ ಪಕ್ಷದ ವಕ್ತಾರ ಮತ್ತು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಅನಂತ್ ಮೂಡಿಗೆರೆ ಹಾಗೂ ಮಾಜಿ ಜಿ.ಪಂ. ಸದಸ್ಯ ಕೆ.ಆರ್. ಕುಮಾರ್ ತರೀಕೆರೆ ಇವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂ.ಎಸ್. ಅನಂತ್ ಅವರು ಮೂಡಿಗೆರೆ ಕಸಬಾ ಕ್ಷೇತ್ರದ ಮಾಜಿ ಜಿ.ಪಂ. ಸದಸ್ಯರಾಗಿದ್ದು, ಈ ಹಿಂದೆ ತೆಲಂಗಾಣ ಮತ್ತು ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.


