ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ, ಇದರ ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿತು.
ಮೂಡಿಗೆರೆ ಜೇಸಿ ಭವನದಲ್ಲಿ ಹಮ್ಮಿಕೊಂಡಿದ್ದ ಪದಗ್ರಹಣ ಸಮಾರಂಭದಲ್ಲಿ ಶ್ರೀಮತಿ ವಿದ್ಯಾಶಶಿ ಅವರು ಮತ್ತು ಸಂಘದ ಪದಾಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡರು.

ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ಬಿ. ನಿಂಗಯ್ಯ ಉದ್ಘಾಟಿಸಿದರು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕ ಹೆಚ್.ಎಂ. ಶಾಂತಕುಮಾರ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯ ಭಾಷಣಕಾರರಾಗಿ ಚಿಕ್ಕಮಗಳೂರು ಜಿಲ್ಲೆಯ ಸಾಹಿತ್ಯ ಪರಂಪರೆಯ ಬಗ್ಗೆ ಸಾಹಿತಿ ಹೆಚ್.ಎಂ. ನಾಗರಾಜ್ ರಾವ್ ಕಲ್ಕಟ್ಟೆ ಮಾತನಾಡಿದರು.
ವೇದಿಕೆಯಲ್ಲಿ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ, ಕಸಾಪ ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಡಿ.ಕೆ. ಲಕ್ಷ್ಮಣಗೌಡ, ಕಸಾಪ ಕಸಬಾ ಹೋಬಳಿ ಅಧ್ಯಕ್ಷ ರವಿ ಕುನ್ನಹಳ್ಳಿ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಜಗದೀಪ್, ಕರವೇ ತಾಲ್ಲೂಕು ಅಧ್ಯಕ್ಷ ವಿನೋದ್ ಬಿದರಹಳ್ಳಿ, ಹಸೇನಾರ್ ಬಿಳಗುಳ ಮುಂತಾದವರು ಇದ್ದರು. ಸಾಹಿತಿ ಹಾಗೂ ಜಿಲ್ಲಾ ಬರಹಗಾರರ ಸಂಘದ ಗೌರವ ಅಧ್ಯಕ್ಷ ಎಂ.ಎಸ್. ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶ್ರೀಮತಿ ಲತಾ ಕಾರ್ಯಕ್ರಮ ನಿರೂಪಿಸಿದರು, ಶ್ರೀಮತಿ ಇಂಪಾ ಸವಿನ್ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿತ್ತು, ಕವಿಗೋಷ್ಠಿಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಿದರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ, ಉಪನ್ಯಾಸಕ ಸಂಪತ್ ಬೆಟ್ಟಗೆರೆ ವಹಿಸಿದ್ದರು.


