ಕರ್ನಾಟಕ ರಕ್ಷಣಾ ವೇದಿಕೆ ಮೂಡಿಗೆರೆ ತಾಲ್ಲೂಕು ಘಟಕದ ವತಿಯಿಂದ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಮೂಡಿಗೆರೆ ಪಟ್ಟಣದ ಲ್ಯಾಂಪ್ಸ್ ಸಭಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು ನುಡಿ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವನ್ನು ಗೌರವಿಸಿ ಸನ್ಮಾನಿಸಲಾಯಿತು.




ಕನ್ನಡ ಸಾಹಿತ್ಯ ಪರಿಷತ್ತು, ಬೆಳೆಗಾರರ ಸಂಘಟನೆ, ನಿವೃತ್ತ ಯೋಧರು, ಪತ್ರಕರ್ತರು, ಪೌರಕಾರ್ಮಿಕರನ್ನು, ಸಮಾಜ ಸೇವಕರನ್ನು ಗುರುತಿಸಿ ಗೌರವಿಸಲಾಯಿತು.
ಕರವೇ ಮೂಡಿಗೆರೆ ತಾಲ್ಲೂಕು ಘಟಕದ ಅಧ್ಯಕ್ಷರಾದ ವಿನೋದ್ ಬಿದರಹಳ್ಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರವೇ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರುಗಳು, ವಿವಿಧ ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



