Screenshot_2024-11-10-18-11-01-88_40deb401b9ffe8e1df2f1cc5ba480b12_copy_544x399

 

 

ಕಳಸ ತಾಲ್ಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಶರತ್ ಕುಮಾರ್ ಮತ್ತು ಪ್ರಕಾಶ್ ಅವರು ಮೇಲಧಿಕಾರಿಗಳ ನಿರ್ದೇಶನ ಪಾಲಿಸುತ್ತಿಲ್ಲ, ಸಾರ್ವಜನಿಕರ ಭೇಟಿಗೆ ಸಿಗದೆ ಕರ್ತವ್ಯ ಚ್ಯುತಿ ಎಸಗುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಇಬ್ಬರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದರು.ಅದರಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಇಬ್ಬರನ್ನೂ ಅಮಾನತ್ತುಗೊಳಿಸಿದ್ದಾರೆ.

ಪ್ರಥಮ ದರ್ಜೆ ಸಹಾಯಕ ಪ್ರಕಾಶ್ 2024-2025ನೇ ಸಾಲಿನ ಮಳೆಹಾನಿ ಪರಿಹಾರದ ಸಂತ್ರಸ್ತರ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಲು ನಿರ್ಲಕ್ಷ್ಯ ತೋರಿಸಿದ್ದರು. ನೌಕಕರ ಇ ಆಫೀಸ್ ಲಾಗಿನ್ ಸ್ವತಃ ಬಳಕೆ ಮಾಡದೆ ಆಪರೇಟರ್ ಮೂಲಕ ಕಡತ ವಿಲೇವಾರಿ ಕೆಲಸ ಮಾಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಮತ್ತೊಬ್ಬ ಸಿಬ್ಬಂದಿ ಶರತ್ ಕುಮಾರ್ ಕೂಡ ಕಚೇರಿ ಕರ್ತವ್ಯಕ್ಕೆ ನಿಗದಿತ ಸಮಯಕ್ಕೆ ಬಾರದೆ ನಿರ್ಲಕ್ಷ್ಯ ತೋರುತ್ತಿದ್ದರು. ಸಾರ್ವಜನಿಕ ಕೆಲಸಗಳ ಬಗ್ಗೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದರು. ಈತನು ಕೂಡ ಈ ಆಫೀಸ್ ಲಾಗಿನ್ ಅನ್ನು ಬಳಕೆ ಮಾಡದೆ ಆಪರೇಟರ್ ಮೂಲಕ ಕಡತ ವಿಲೇವಾರಿ ಮಾಡಿಸುತ್ತಿದ್ದರು ಎಂಬ ದೂರು ಇತ್ತು.

ಇಬ್ಬರ ಮೇಲಿನ ಈ ಆರೋಪಗಳು ಮೇಲ್ನೋಟಕ್ಕೆ ದೃಢಪಟ್ಟಿರುವ ಕಾರಣ ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನುಸಾರ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ