ರಾಜ್ಯದಲ್ಲಿ ಮತ್ತೆ ಮಳೆಯ ಕಾರ್ಮೋಡ ಆವರಿಸಿದೆ . ರಾಜ್ಯದ ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನವೆಂಬರ್ 15ರವರೆಗೆ ಮೇಲ್ಕಂಡ ಜಿಲ್ಲೆಗಳ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿದೆ. ನವೆಂಬರ್ 14ರಂದು ಹೆಚ್ಚಿನ ಮಳೆಯ ಸಾಧ್ಯತೆಯ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಮಂಡ್ಯ, ಹಾಸನ, ಚಿತ್ರದುರ್ಗ, ಬೀದರ್, ಕೊಪ್ಪಳ, ವಿಜಯಪುರ, ದಾವಣಗೆರೆ, ತುಮಕೂರು, ರಾಮನಗರ, ಕೋಲಾರ, ಗದಗ, ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಇದೀಗ ಮಲೆನಾಡಿನ ರೈತರು ಭತ್ತದ ಕಟಾವು, ಕಾಫಿ ಅಡಿಕೆ ಕೊಯ್ಲು ಪ್ರಾರಂಭಿಸಿದ್ದು, ಮತ್ತೆ ಮಳೆಯ ಕಾರ್ಮೋಡದಿಂದ ಆತಂಕಕ್ಕೆ ಒಳಗಾಗಿದ್ದಾರೆ.



