karge 2

 

 

ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ಗ್ರಾಮೀಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಚಯಗಳು ನಿರ್ಮಾಣಗೊಂಡಿವೆ. ಬಹುಪಾಲು ಆಸ್ತಿಗಳು ಗ್ರಾ.ಪಂ. ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾ.ಪಂ.ಗಳ ಸಂಪನ್ಮೂಲ ಕ್ರೋಡೀಕರಣದಲ್ಲಿ ಹಿನ್ನಡೆ ಉಂಟಾಗಿದೆ.

ಹೀಗಾಗಿ ಗ್ರಾ.ಪಂ.ಗಳನ್ನು ಸದೃಢಗೊಳಿಸುವಲ್ಲಿ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅನಿವಾರ್ಯ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯಪಡೆ ರಚಿಸಲಾಗುವುದು. ಗ್ರಾಮಗಳಿಗೆ ಹೊಂದಿಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು ದಾಖಲೆಯನ್ನು ಸುಗಮವಾಗಿ ಪಡೆದುಕೊಳ್ಳುವಲ್ಲಿ ಪರಿಹಾರಗಳನ್ನು ಕಾರ್ಯಪಡೆ ಸೂಚಿಸಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ