ಮಾದಕ ದ್ರವ್ಯಗಳ ಹಾನಿಕಾರಕ ಪರಿಣಾಮಗಳ ಕುರಿತು ಮಾಹಿತಿ ನೀಡಲು ಹಾಗೂ ಡ್ರಗ್ಸ್ ಸಾಗಾಣಿಕೆ, ಸಂಗ್ರಹಣೆ, ಸೇವನೆ, ಮಾರಾಟ, ಖರೀದಿ, ತಯಾರಿಕೆ ಅಥವಾ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಾರ್ವಜನಿಕರು ಪೊಲೀಸರಿಗೆ ತಿಳಿಸಲು ಕರ್ನಾಟಕ ರಾಜ್ಯ ಪೊಲೀಸ್ ನೂತನ ಉಪಕ್ರಮವಾಗಿ Drug Free Karnataka ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ.
ಸಾರ್ವಜನಿಕರು ನೀಡುವ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಸಾರ್ವಜನಿಕರು ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಮಾದಕ ವಸ್ತುಗಳ ಬಗ್ಗೆ ಮಾಹಿತಿಯನ್ನು ಒದಗಿಸಿ, ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸುವಂತೆ ವಿನಂತಿಸಲಾಗಿದೆ.
ಮೊಬೈಲ್ ಅಪ್ಲಿಕೇಶನ್ ಗೂಗಲ್ ಸ್ಟೋರ್‌ನಲ್ಲಿ ಲಭ್ಯವಿದೆ:


