September 13, 2026
;
Screenshot_2024-11-23-16-29-18-76_40deb401b9ffe8e1df2f1cc5ba480b12_copy_534x284

 

 

ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ.

ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವು ಪಡೆಯುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದ್ದು ಇಲ್ಲಿ ಕಾಂಗ್ರೆಸ್ ನ ಸಿ.ಪಿ ಯೋಗೇಶ್ವರ್ ಸುಮಾರು 25 ಸಾವಿರ ಮತಗಳ ಅಂತರದ ಭರ್ಜರಿ ಗೆಲುವು ಪಡೆದಿದ್ದಾರೆ.

ಶಿಗ್ಗಾವಿ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪತ್ರ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಯಾಸೀರ್ ಅಹ್ಮದ ಖಾನ್ ಸುಮಾರು 13000 ಮತಗಳ ಅಂತರದಲ್ಲಿ ಗೆಲುವಿನ ನಗು ಬೀರಿದ್ದಾರೆ.

ಸಂಡೂರಿನಲ್ಲಿ ಸಂಸದ ತುಕಾರಾಂ ಅವರ ಪತ್ನಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರ ಹನುಮಂತವರನ್ನು 9000 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ

ಈ ಮೂಲಕ ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು ಆಡಳಿತ ಪಕ್ಷದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ.

ಇತ್ತ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆಯಿಂದ ಎದುರಿಸಿದ್ದ ಚುನಾವಣೆಯಲ್ಲಿ ಮೂರೂ ಕಡೆಗಳಲ್ಲಿ ಸೋಲನುಭವಿಸುವ ಮೂಲಕ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;