ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಪೂರ್ಣ ಫಲಿತಾಂಶ ಹೊರಬಂದಿದೆ.
ಮಹಾರಾಷ್ಟ್ರದ 280 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳಲ್ಲಿ ‘ಪ್ರಚಂಡ’ ಗೆಲುವು ಸಾಧಿಸಿದ್ದರೆ ಅತ್ತ ಜಾರ್ಖಂಡ್ ನಲ್ಲಿ ಜೆಎಂಎಂ ನೇತೃತ್ವಧ ಇಂಡಿಯಾ ಮೈತ್ರಿಕೂಟ 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರ ಹಾಗೂ ಅಜಿತ್ ಪವಾರ್ ನೇತೃತ್ವದ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ಸತತ ಮೂರನೇ ಬಾರಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರಚನೆ ಮಾಡಲಿದೆ. ಕಾಂಗ್ರೇಸ್ ಇಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ.
ಇನ್ನು ಮಹಾವಿಕಾಸ್ ಅಘಾಡಿ ಹೀನಾಯ ಸೋಲು ಕಂಡಿದೆ. ಕೇವಲ 49 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ವಿಪಕ್ಷ ನಾಯಕನ ಸ್ಥಾನವು ಇಲ್ಲದಂತಾಗಿದೆ.
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಯುಬಿಟಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಕೇವಲ 10 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಇನ್ನು 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ 16 ಕ್ಷೇತ್ರಗಳನ್ನು ಮಾತ್ರ ಗೆದ್ದಿದೆ. ಆ ಮೂಲಕ ಇಂಡಿ ಕೂಟಕ್ಕೆ ತೀವ್ರ ಮುಖಭಂಗ ಎದುರಿಸಿದೆ.
ಮತ್ತೊಂಡೆದೆ ಜಾರ್ಖಂಡ್ ನಲ್ಲಿ 81 ವಿಧಾನಸಭೆ ಕ್ಷೇತ್ರಗಳ ಪೈಕಿ ಹೇಮಂತ್ ಸೊರೆನ್ ನೇತೃತ್ವದ ಜೆಎಂಎಂ ಪಕ್ಷ ಒಂದೇ 34 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್ 16 ಹಾಗೂ ಆರ್ ಜೆಡಿ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 56 ಕ್ಷೇತ್ರಗಳ ಗೆಲುವಿನೊಂದಿಗೆ INDIA blocಗೆ ಸ್ಪಷ್ಟ ಬಹುಮತ ಬಂದಿದ್ದು ಹೇಮಂತ್ ಸೊರೆನ್ ನೇತೃತ್ವದಲ್ಲಿ ಜೆಎಂಎಂ ಸರ್ಕಾರ ರಚಿಸಲಿದೆ.
ಇನ್ನು ಈ ಬಾರಿ ಜಾರ್ಖಂಡ್ ನಲ್ಲಿ ಗೆಲುವಿನ ನಿರೀಕ್ಷೆ ಹೊಂದಿದ್ದ ಬಿಜೆಪಿಗೆ ಸೋಲಾಗಿದ್ದು. ಎನ್ ಡಿಎ ಮೈತ್ರಿಕೂಟ ಕೇವಲ 24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.


