raitha 33

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಜೀವ ಕಾಡಾನೆ ದಾಳಿಗೆ ಬಲಿಯಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನಲ್ಲಿ ಕೃಷಿಕರೋರ್ವರು ಕಾಡಾನೆ ದಾಳಿಯಿಂದ ಜೀವ ಕಳೆದುಕೊಂಡಿದ್ದಾರೆ.

ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕೃಷಿಕ  ಉಮೇಶ್ (56) ಎಂಬುವವರು ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇಂದು ಶನಿವಾರ ಮಧ್ಯಾಹ್ನ ಸುಮಾರು 3-30ರ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರ ಗಾಯಗೊಂಡು ಉಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಡಾನೆ ದಾಳಿಗೆ ಉಮೇಶ್ ಅವರ ದೇಹ ಸಂಪೂರ್ಣ ಛಿದ್ರವಾಗಿದ್ದು, ಆ ದೃಶ್ಯ ಹೃದಯವಿದ್ರಾವಕವಾಗಿದೆ.

ಕಳೆದ ಕೆಲ ದಿನಗಳಿಂದ ಮೂರು ಆನೆಗಳ ತಂಡ ಸೀತೂರು, ಕೆಸವೆ, ಬಿಂತ್ರವಳ್ಳಿ, ಕುದ್ರೆಗುಂಡಿ ಸುತ್ತಮುತ್ತಾ ರೈತರ ಜಮೀನುಗಳಿಗೆ ಲಗ್ಗೆ ಇಡುತ್ತಿದ್ದವು. ಅವರುಗಳನ್ನು ಸಕಾಲದಲ್ಲಿ ಕಾಡಿಗಟ್ಟಲು ಅರಣ್ಯ ಇಲಾಖೆ ವಿಫಲವಾಗಿದ್ದು ಈಗ ಜೀವವೊಂದು ಬಲಿಯಾಗುವಂತಾಗಿದೆ.

ರೈತರ ಸಾವಿನ ಬಗ್ಗೆ  ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು, ಅರಣ್ಯ ಅಧಿಕಾರಿಗಳ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ