shivaprasad1

 

 

ಪರಿಸರಕ್ಕೆ ಪೂರಕವಾದ ಜೈವಿಕ ಗೊಬ್ಬರ (Bio Fertilizer) ಗಳನ್ನು ತಮ್ಮ ಜಮೀನಿಗೆ ಬಳಕೆ ಮಾಡುವ ರೈತರಿಗೆ ಪ್ರೋತ್ಸಾಹವಾಗಿ ಗ್ರೀಸ್ ಸೆಸ್ ನ ಹಣವನ್ನು ನೀಡಬೇಕು ಎಂದು ಬಿಜೆಪಿ ಮುಖಂಡ, ಸಮಾಜ ಸೇವಕ ಡಾ. ಶಿವುಪ್ರಸಾದ್ ಎಸ್.ಆರ್. ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರ ಮೂಲಕ ಕೇಂದ್ರ ಸರ್ಕಾರಕ್ಕೆ ಅವರು ಮನವಿ ಪತ್ರ ಸಲ್ಲಿಸಿದ್ದಾರೆ.

ಅವರು ತಮ್ಮ ಮನವಿ ಪತ್ರದಲ್ಲಿ ಕೃಷಿಯಲ್ಲಿ ರಾಸಾಯನಿಕಗಳ ಬಳಕೆಯಿಂದ ಮಣ್ಣು ಮತ್ತು ವಾತಾವರಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಣ್ಣಿನ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ರಾಸಾಯನಿಕಗಳ ಅತಿಯಾದ ಬಳಕೆ ಜಾಗತಿಕ ತಾಪಮಾನ ಹೆಚ್ಚಳಕ್ಕೂ ಕಾರಣವಾಗುತ್ತಿದೆ. ಇದರಿಂದ ಕೃಷಿ ಮತ್ತು ಜನಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೃಷಿ ಉತ್ಪನ್ನ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳಿಗೆ ಪರ್ಯಾಯವಾಗಿ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡುವುದರಿಂದ ಪರಿಸರ ಸ್ನೇಹಿ ಕೃಷಿ ಮಾಡಲು ಸಾಧ್ಯವಾಗುತ್ತದೆ. ಇಂದು ಅನೇಕ ರೈತರು ಕೇವಲ ಜೈವಿಕ ಗೊಬ್ಬರಗಳನ್ನು ಮಾತ್ರ ಬೆಳೆದು ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಜೈವಿಕ ಗೊಬ್ಬರಗಳು ಮಣ್ಣಿನಲ್ಲಿ ಸೂಕ್ಷ್ಮ ಜೀವಿಗಳ ಚಟುವಟಿಕೆಯನ್ನು ಉತ್ತೇಜಿಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತವೆ. ಇವು ಪರಿಸರಕ್ಕೂ ಯಾವುದೇ ಹಾನಿಯನ್ನು ಉಂಟುಮಾಡುವುದಿಲ್ಲ. ಹಸಿರುಮನೆ ಪರಿಸರಕ್ಕೆ ಇವು ಪೂರಕವಾಗಿವೆ.

ಹಾಗಾಗಿ ರೈತರು ಅತಿಯಾಗಿ ರಾಸಾಯನಿಕಗಳನ್ನು ಬಳಸುವುದನ್ನು ತಪ್ಪಿಸಲು, ಜೈವಿಕ ಗೊಬ್ಬರಗಳ ಕಡೆ ಆಸಕ್ತಿ ತೋರಲು ಸರ್ಕಾರ ಕ್ರಮ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಜೈವಿಕ ಗೊಬ್ಬರ ಬಳಕೆ ಮಾಡಿ ಕೃಷಿ ಮಾಡುವ ರೈತರಿಗೆ ಗ್ರೀನ್ ಸೆಸ್ (ಹಸಿರು ತೆರಿಗೆ) ನ ಒಂದು ಭಾಗವನ್ನು ಪ್ರೋತ್ಸಾಹ ಧನವಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಿದ್ದೇ ಆದಲ್ಲಿ ಇಂದಿನ ಜಾಗತಿಕ ತಾಪಮಾನ ಸೇರಿದಂತೆ ಅನೇಕ ಪರಿಸರ ಸಂಬಂಧಿ ಸಮಸ್ಯೆಗಳಿಗೆ ಪರಿಹಾರವನ್ನು ಕಾಣಬಹುದಾಗಿದೆ ಎಂದು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಮನವಿ ಪತ್ರ ಸ್ವೀಕರಿಸಿ ಮಾತನಾಡಿರುವ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರು ; ಡಾ. ಶಿವಪ್ರಸಾದ್ ಅವರು ಪ್ರಸ್ತಾಪಿಸಿರುವ ವಿಚಾರ ಅತ್ಯಂತ ಮುಖ್ಯವಾಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ, ಸಂಸತ್ತಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ