ಭಾನುವಾರ ದಾವಣಗೆರೆ ಜಿಲ್ಲೆ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮ ಶಾಲಾ ಕಲ್ಯಾಣ ಮಂಟಪದಲ್ಲಿ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ಮತ್ತು ಸಮಾಜಸೇವಕರನ್ನು ಗುರುತಿಸಿ ಸನ್ಮಾನಿಸಲಾಗಿದೆ.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಾಫಿನಾಡು ಸಮಾಜ ಸೇವಾ ಸಂಘದ ಹಸೈನಾರ್ ಬಿಳಗುಳ ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ಇವರಿಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಹಸೈನಾರ್ ಆವರು ಕಾಫಿನಾಡು ಸಮಾಜ ಸೇವಾ ಸಂಘವನ್ನು ಪ್ರಾರಂಭಿಸಿ ತಮ್ಮ ಸ್ನೇಹಿತರ ಜೊತೆಗೂಡಿ ಅನೇಕ ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದಾರೆ.
ನಿರ್ಗತಿಕರನ್ನು ಆರೈಕೆ ಮಾಡಿ ಅನಾಥ ಆಶ್ರಮಗಳಿಗೆ ಸೇರಿಸುವುದು, ಅವಘಡಗಳು ಸಂಭವಿಸಿದಾಗ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯ ಕೈಗೊಳ್ಳುವುದು ಸೇರಿದಂತೆ ವಿವಿಧ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.




