ips 2

ತರಬೇತಿ ಮುಗಿಸಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಹಾಸನಕ್ಕೆ ಬರುತ್ತಿದ್ದ ಯುವ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ  ಐಪಿಎಸ್‌   ಅಧಿಕಾರಿ ಹರ್ಷಬರ್ದನ್(27 ವರ್ಷ), ಹಾಸನ ಬಳಿ   ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.‌

ಬಿಹಾರ ಮೂಲದ ಹರ್ಷಬರ್ದನ್ ಅವರು ಮೈಸೂರಿನಲ್ಲಿರುವ ಕರ್ನಾಟಕದ ಪೊಲೀಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ಬಳಿಕ ಐಜಿಪಿ ಬೋರಲಿಂಗಯ್ಯ ಎದುರು ರಿಪೋರ್ಟ್ ಮಾಡಿಕೊಂಡಿದ್ದರು. ಸೋಮವಾರ ಹಾಸನ ಎಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು.

ಹರ್ಷಬರ್ದನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ಇಂದು (ಭಾನುವಾರ) ಸಂಜೆ ವರದಿ ಮಾಡಿಕೊಳ್ಳಲು  ಮೈಸೂರಿನಿಂದ ಹೊರಟು  ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಅವರನ್ನು ಕರೆತರಲು ಹಾಸನದಿಂದಲೇ ಪೊಲೀಸ್ ಜೀಪ್ ತೆರಳಿತ್ತು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಹಾಸನದಿಂದ ಸುಮರು ಹತ್ತು ಕಿಲೋಮೀಟರ್ ದೂರದ ಕಿತ್ತಾನೆಗಡಿ ಬಳಿ ಜೀಪ್‌ನ ಟಯರ್ ಸ್ಫೋಟಗೊಂಡಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿ ರಸ್ತೆಪಕ್ಕದ ಮನೆಯೊಂದಕ್ಕೆ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಐಪಿಎಸ್ ಅಧಿಕಾರಿಯ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.   ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬುವರಿಗೂ ಗಾಯಗಳಾಗಿವೆ.

ಹಾನಸ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕರೆದೊಯ್ಯಲು ಪೊಲೀಸ್ ಇಲಾಖೆ ತಯಾರಿ ನಡೆಸಿತ್ತು. ಆದರೆ ಅಷ್ಟರಲ್ಲಾಗಲೇ ಹರ್ಷಬರ್ದನ್ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಮೂಲತಃ ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ 153 ನೇ Rank ಪಡೆದು ಪಾಸ್ ಆಗಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದರು. ಹತ್ತಾರು ಕನಸುಗಳನ್ನು ಹೊತ್ತು ವೃತ್ತಿಜೀವನಕ್ಕೆ ಕಾಲಿಡಲು ಬರುತ್ತಿದ್ದ ಅವರ ಬದುಕು ದುರಂತ ಅಂತ್ಯ ಕಂಡಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ