pundaru2

 

 

ಮೂಡಿಗೆರೆ ಪಟ್ಟಣದ ಕೆ.ಎಂ. ರಸ್ತೆ ಬಾರ್ ಒಂದರ ಎದುರು ರಸ್ತೆಗೆ ಮೂತ್ರ ಮಾಡುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರು ಬಿಜೆಪಿ ಮುಖಂಡರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಐವರು ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ ಸುಮಾರು 8 ಗಂಟೆಯ ಸಮಯದಲ್ಲಿ ಜಿ.ಪಂ. ಮಾಜಿ ಸದಸ್ಯ, ಕೋಮಾರ್ಕ್ ಅಧ್ಯಕ್ಷ ಅರೇಕೂಡಿಗೆ ಶಿವು ಮತ್ತು ಊರುಬಗೆ ಗ್ರಾ.ಪಂ. ಮಾಜಿ ಅಧ್ಯಕ್ಷ ಉದಯಕುಮಾರ್ ಅವರು ಕೆ.ಎಂ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸುದರ್ಶನ್ ಬಾರ್ ಮತ್ತು ಚಂದನ್ ಬಾರ್ ಎದುರಿನಲ್ಲಿ ರಸ್ತೆಗೆ ಮುಖಮಾಡಿ ಯುವಕನೋರ್ವ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎನ್ನಲಾಗಿದೆ.  ಯುವಕನ ಅಸಭ್ಯ ವರ್ತನೆಗೆ ಅರೇಕೂಡಿಗೆ ಶಿವು ಆಕ್ಷೇಪ ವ್ಯಕ್ತಪಡಿಸಿ ಬುದ್ದಿ ಹೇಳಿದ್ದಾರೆ. ಇಷ್ಟಕ್ಕೆ ಕೆರಳಿದ ಯುವಕ ತನ್ನೊಂದಿಗೆ ಬಾರ್ ಗೆ ಮದ್ಯಪಾನ ಮಾಡಲು ಬಂದಿದ್ದ ತನ್ನ ಸ್ನೇಹಿತರ ಜೊತೆಗೂಡಿ ಶಿವು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮಧ್ಯಪ್ರವೇಶಿಸಿದ ಉದಯ್ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ರಸ್ತೆಬದಿಯಲ್ಲಿದ್ದ ಕಲ್ಲುಗಳಿಂದಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಶಿವು ಅವರ ಕಾಲಿಗೆ ತೀವ್ರ ಪೆಟ್ಟಾಗಿದೆ. ಉದಯ್ ಅವರ ತಲೆಗೆ ಪೆಟ್ಟಾಗಿದೆ.

ಗಲಾಟೆಯ ವಿಷಯ ತಿಳಿದು ಮೂಡಿಗೆರೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ, ಹಲ್ಲೆ ನಡೆಸಿದ ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಹಲ್ಲೆಗೆ ಸಂಬಂಧಿಸಿದಂತೆ ಐದು ಮಂದಿ ಯುವಕರ ವಿರುದ್ಧ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಣಕಲ್ ಸಮೀಪದ ಬಿ.ಹೊಸಳ್ಳಿ ಗ್ರಾಮದ ಹೊಸಕೆರೆಯ ನಿವಾಸಿಗಳಾದ ಚೇತನ್, ರಾಕೇಶ್, ಕೀರ್ತಿಕುಮಾರ್, ರಘು, ಬೆಟ್ಟಗೆರೆ ಗ್ರಾಮದ ಕೃತಿಕ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದ್ದು, ಇವರಲ್ಲಿ ಚೇತನ್, ರಾಕೇಶ್ ಮತ್ತು ಕೀರ್ತಿಕುಮಾರ್ ಇವರುಗಳನ್ನು ನಿನ್ನೆ ರಾತ್ರಿಯೇ ಪೊಲೀಸರ ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

ಆರೋಪಿಗಳ ಮೇಲೆ ಕೊಲೆಯತ್ನಕ್ಕೆ ಸಂಬಂಧಿಸಿದ 109 ಸೇರಿದಂತೆ ವಿವಿಧ ಸೆಕ್ಷನ್ ಗಳನ್ನು ಹಾಕಲಾಗಿದೆ.

ಗಾಯಗೊಂಡಿರುವ ಶಿವು ಮತ್ತು ಉದಯ್ ಅವರಿಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಪುಂಡ ಯುವಕರ ಕೃತ್ಯವನ್ನು ಮೂಡಿಗೆರೆ ಸಾರ್ವಜನಿಕರು ಒಕ್ಕೊರಲಿನಿಂದ ಖಂಡಿಸಿದ್ದಾರೆ. ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಯುವಕರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ