ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದ್ದು, ಮುಂಜಾಗ್ರಾತಾ ಕ್ರಮವಾಗಿ ನಾಳೆ(ಡಿಸೆಂಬರ್ 03) ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಂಗನವಾಡಿ ಮತ್ತು ಶಾಲಾಗಳಿಗೆ ರಜೆ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ನಾಳೆಯೂ(ಡಿಸೆಂಬರ್ 3) ಸಹ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು ಜಿಲ್ಲಾದ್ಯಂತ ತುಂತುರು ಮಳೆಯಾಗುತ್ತಿದ್ದು, ನಾಳೆಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ರಜೆ ನೀಡಿದ್ದಾರೆ.




