ಮೂಡಿಗೆರೆ ಕ್ಷೇತ್ರದಲ್ಲಿ ಕಾರ್ಯಕರ್ತರ ಒಳ ಅಸಮಧಾನದಿಂದ ಬಿಜೆಪಿ ಪಕ್ಷ ಸೋಲು ಅನುಭವಿಸುವಂತಾಯಿತು ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ವಿಷಾದ ವ್ಯಕ್ತ ಪಡಿಸಿದರು.
ಅವರು ಬಾಳೂರು ಹೋಬಳಿಯ ಬಿಜೆಪಿ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಮತ್ತು ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಾಳೂರು ಶಕ್ತಿ ಕೇಂದ್ರ ಒಂದು ಸಮಯದಲ್ಲಿ ಕಮ್ಯೂನಿಸ್ಟ್ ಪಕ್ಷದ ವರ್ಚಸ್ಸಿತ್ತು. ಅದನ್ನು ಬಿಜೆಪಿ ಕಾರ್ಯಕರ್ತರು ಹಂತಹಂತವಾಗಿ ಬಿಜೆಪಿ ಪಕ್ಷಕ್ಕೆ ಸೇರಿಸಿ ಈಗ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಗಟ್ಟಿಯಾಗಿದೆ. ಇದಕ್ಕೆ ಕಾರ್ಯಕರ್ತರ ಪರಿಶ್ರಮದಿಂದ ಸಾಧ್ಯವಾಗಿದೆ. ನಮ್ಮ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಕಾಂಗ್ರೆಸ್ ಸರ್ಕಾರ ವನ್ನು ಕಿತ್ತೊಗೆಯಲು ಪಣ ತೊಡಬೇಕು ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ ದೇಶದ ವಕ್ಫ್ ಕಾಯಿದೆಯನ್ನು ಸಂವಿಧಾನ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಸರ್ವ ಧರ್ಮದ ಶಾಸನಗಳು ಸಂವಿಧಾನದ ವ್ಯಾಪ್ತಿಗೆ ಬರಬೇಕು. ವಿವಿಧ ಮಂಡಳಿಗಳು ಸಂವಿಧಾನದಡಿಯಲ್ಲೇ ಕಾರ್ಯ ನಿರ್ವಹಿಸಬೇಕು. ವಕ್ಫ್ ಕಾಯಿದೆಯು ಸಂವಿಧಾನದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಅದನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನದಡಿಯಲ್ಲಿ ಕಾಯಿದೆ ತಿದ್ದುಪಡಿ ಮಾಡಲು ಮುಂದಾಗಿದೆ. ಬಿಜೆಪಿ ಸರ್ಕಾರ ವಕ್ವ್ ಕಾಯಿದೆ ರದ್ದು ಪಡಿಸಲು ಹೊರಟಿಲ್ಲ. ಅದನ್ನು ಕಾಂಗ್ರೆಸ್ ಸುಳ್ಳು ಹೇಳಿ ತಿರುಚುತ್ತಿದೆ. ಕಾಂಗ್ರೆಸ್ ಪಕ್ಷದ ಸುಳ್ಳುಗಳನ್ನು ಜನರ ಮುಂದೆ ಸತ್ಯಾಂಶಗಳನ್ನು ತಿಳಿಸಲು ಹೊರಟಿದ್ದೇವೆ. ಮೂಡಿಗೆರೆ ವಿಧಾನ ಸಭಾ ಕ್ಷೇತ್ರ 2028ರಲ್ಲಿ ಬಿಜೆಪಿ ಗೆದ್ದು ತೀರುತ್ತದೆ’ ಎಂದರು.

ಮಾಜಿ ಸಚಿವ ಜೀವರಾಜ್ ಮಾತನಾಡಿ”ಕಾಂಗ್ರೆಸ್ ಸರ್ಕಾರ ಬಡವರ ಬಿಪಿಎಲ್ ಕಾರ್ಡುಗಳನ್ನು ಹಿಂಪಡೆಯಲು ಹೊರಟಿದೆ. ನಗರಗಳಲ್ಲಿ ಪಡಿತರ ಅಂಗಡಿದಾರರಿಗೆ ಅಕ್ರಮ ಬಿಪಿಎಲ್ ಕಾರ್ಡುಗಳಿವೆ. ಅವುಗಳನ್ನು ಮೊದಲು ರದ್ದು ಪಡಿಸಲಿ. ರೈತರು ಬಡವರಾಗಿದ್ದು ಅವರ ಬಿಪಿಎಲ್ ಕಾರ್ಡ್ ರದ್ದು ಪಡಿಸುವುದು ಕಾಂಗ್ರೆಸ್ ಸರ್ಕಾರದ ನೀತಿ ಎಷ್ಟು ಸರಿ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಮನುಷ್ಯರ ಪ್ರಾಣಕ್ಕೆ ಬೆಲೆಯಿಲ್ಲ, ಪ್ರಾಣಿಗಳ ಜೀವಕ್ಕೆ ಬೆಲೆ ನೀಡುವಂತಾಗಿದೆ. ಕಾಂಗ್ರೆಸ್ ಸರ್ಕಾರ ಬಡವರ ಬಿಪಿಎಲ್ ಕಾರ್ಡ್ ರದ್ದು ಪಡಿಸುವುದನ್ನು ನಿಲ್ಲಿಸಲಿ’ ಎಂದರು.
ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ’ ಮುಂದೆ ಸೊಸೈಟಿ ಚುನಾವಣೆಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಸಹಕಾರ ನೀಡಿ ಬಿಜೆಪಿ ಗೆಲ್ಲಿಸಲು ಪಣ ತೊಡಬೇಕು. ಎಲ್ಲರ ಸಹಕಾರದಿಂದ ಮಾತ್ರ ಬಿಜೆಪಿ ಪಕ್ಷ ಗೆಲ್ಲಿಸಲು ಸಾಧ್ಯ’ಎಂದರು.
ಮುಖಂಡರಾದ ದೀಪಕ್ ದೊಡ್ಡಯ್ಯ, ಟಿ.ಎಂ.ಗಜೇಂದ್ರ, ಬಿ.ಎಂ.ಭರತ್, ನರೇಂದ್ರಜೀ, ಬಿ.ಆರ್.ಬಾಲಕೃಷ್ಣ ಮತ್ತಿತರರು ಮಾತನಾಡಿದರು. ಸಮಾರಂಭದಲ್ಲಿ ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಅವರಿಗೆ ನಿರ್ಗಮಿತ ಅಧ್ಯಕ್ಷ ಎಂ.ಎಲ್ ವಿಜೇಂದ್ರ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಬಿಜೆಪಿ ಪಕ್ಷದ ಬಲವರ್ಧನೆಗೆ ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಾಯಿಸಿದ ಪರೀಕ್ಷಿತ್ ಜಾವಳಿ, ದಿನಕರ್ ಪೂಜಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ ಎಂ.ಎಲ್.ವಿಜೇಂದ್ರ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಮುಖಂಡರಾದ ಮನೋಜ್, ಪ್ರಮೋದ್,ಕೆ.ಸಿ.ರತನ್,ಜೆ.ಎಸ್.ರಘು,




