September 12, 2026
;
saki 2

 

 

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಖಿಯರ ಮಹಾಒಕ್ಕೂಟದ ಮೂಡಿಗೆರೆ ತಾಲ್ಲೂಕು ಘಟಕದ ವತಿಯಿಂದ ಮೂಡಿಗೆರೆ ಶಾಸಕರಾದ ನಯನ ಮೋಟಮ್ಮ ಅವರಿಗೆ ಮನವಿ ಸಲ್ಲಿಸಿದರು.

ಮಹಾಒಕ್ಕೂಟದ ಮೂಡಿಗೆರೆ ತಾಲ್ಲೂಕು ಘಟಕದ ಅಧ್ಯಕ್ಷೆ ಗಾನವಿ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಮುಖ್ಯಪುಸ್ತಕ ಬರಹಗಾರರಿಗೆ ಮಾಸಿಕ 20 ಸಾವಿರ ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಮತ್ತು ಗ್ರಾ.ಪಂ ಮಟ್ಟದ ಒಕ್ಕೂಟದ ಸಖಿಯರಿಗೆ ಮಾಸಿಕ 15 ಸಾವಿರ ವೇತನ ನೀಡಬೇಕು. ಸರ್ಕಾರದಿಂದ ನೇರವಾಗಿ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ವೇತನ ಜಮೆಯಾಗಬೇಕು ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಮುಖ್ಯಪುಸ್ತಕ ಬರಹಗಾರರು, ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಒಕ್ಕೂಟದ ಸಖಿಯರ ಬೇಡಿಕೆಗಳ ಬಗ್ಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದು ಬೇಡಿಕೆ ಈಡೇರಿಕೆ ಪ್ರಯತ್ನಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಖಿಯರ ಮಹಾಒಕ್ಕೂಟದ ಮೂಡಿಗೆರೆ ತಾಲ್ಲೂಕು ಘಟಕದ ಕಾರ್ಯದರ್ಶಿ ಶ್ವೇತಾ ಶೆಟ್ಟಿ, ಖಜಾಂಚಿ ಪ್ರಾಪ್ತಿ ಹಾಗೂ ಮುಖ್ಯ ಪುಸ್ತಕ ಬರಹಗಾರರು, ಸಂಪನ್ಮೂಲ ವ್ಯಕ್ತಿಗಳು, ಸಖಿಯರು ಇದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;