ದತ್ತಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಶನಿವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಪೊಲೀಸ್ ಅಧೀಕ್ಷಕ ಡಾ. ವಿಕ್ರಂ ಅಮಟೆ, ಉಪವಿಭಾಗಾಧಿಕಾರಿ ದಲ್ಜಿತ್ ಕುಮರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಅಲ್ಲಂಪುರದಿಂದ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐಡಿ ಪೀಠ ಸಂಸ್ಥೆವರೆಗಿನ ರಸ್ತೆಗಳು, ಪಾರ್ಕಿಂಗ್ ಸ್ಥಳಗಳು ಮತ್ತು ಚೆಕ್ ಪೋಸ್ಟ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಡಿಸೆಂಬರ್ 12ರಿಂದ 14ರವರೆಗೆ ಮೂರು ದಿನಗಳ ದತ್ತಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನೆರವೇರಲಿವೆ. ರಾಜ್ಯದಾದ್ಯಂತ ಸಾವಿರಾರು ಸಂಖ್ಯೆಯ ದತ್ತಭಕ್ತರು ದತ್ತಜಯಂತಿಗಾಗಿ ಗಿರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗಿರಿ ಪ್ರದೇಶದ ರಸ್ತೆಯಲ್ಲಿ ವಾಹನ ಸುರಕ್ಷತೆ, ಪಾರ್ಕಿಂಗ್ ವ್ಯವಸ್ಥೆ ;ಮತ್ತು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಜರುಗಿಸಲು ಪೂರ್ವಭಾವಿ ತಯಾರಿಯಲ್ಲಿ ತೊಡಗಿದೆ.




