sdpi

 

 

ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ವತಿಯಿಂದ ಚಲೋ ಬೆಳಗಾವಿ -ಅಂಬೇಡ್ಕರ್ ಜಾಥಾ ಕುರಿತು ಚಿಕ್ಕಮಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ರಾಜ್ಯ ಕಾರ್ಯದರ್ಶಿಗಳಾದ ಅಂಗಡಿ ಚಂದ್ರು ರವರು ಮಾತನಾಡಿ ಪ್ರಸ್ತುತ ಕಾಂಗ್ರೆಸ್ ಸರಕಾರದ ಯು ಟರ್ನ್ ಚಾಳಿಯನ್ನು ಬಿಡಬೇಕು ಹಾಗೂ ಜಾಥಾದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.

ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪಸಂಖ್ಯಾತ, ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿಲ್ಲ. ಕೇವಲ ನೆಪ ಮಾತ್ರದ ಮೌಖಕ ಹೇಳಿಕೆಗಳನ್ನು ನೀಡಿ ಕಣ್ಣೆರೆಸುವ ತಂತ್ರ ಮಾಡುತ್ತಿದೆ.

ಈ ಅಸಹಾಯಕ  ಯು ಟರ್ನ್ ಚಾಳಿಯನ್ನು ಖಂಡಿಸಿ, ಚಳಿಗಾಲದ ಅಧಿವೇಶನ ನಡೆಯುವ ಸುವರ್ಣಸೌಧ ಬೆಳಗಾವಿಗೆ ಈ ಕೆಳಕಂಡ ಜನಾಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ -2 ಅನ್ನು ಹಮ್ಮಿಕೊಂಡಿದ್ದೇವೆ.

• ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು.
• ಮುಸ್ಲಿಮರ 2ಃ ಮೀಸಲಾತಿಯನ್ನು ಪುನರ್ಸ್ಥಾಪಿಸಿ ಶೇಕಡಾ 8ಕ್ಕೆ ಏರಿಸಬೇಕು.
• ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಿ ಮತ್ತು ಜಾರಿಗೊಳಿಸಬೇಕು.
• ವಕ್ಫ ಆಸ್ತಿಗಳ ರಕ್ಷಣೆ, ಒಕ್ಕೂಟ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿ ಜಾರಿಗೆ ತರಲು ಹೊರಟಿರುವ ವಕ್ಫ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಬಾರದೆನ್ನುವ ನಿರ್ಣಯವನ್ನು ಸದನದಲ್ಲಿ ಕೈಗೊಳ್ಳಬೇಕು.
• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರುವ SCP/TSP ಹಣವನ್ನು ಬೇರೆ ಯಾವುದೇ ಯೋಜನೆಗಳಿಗೆ ಬಳಸಬಾರದು.
• 25-26 ನಾಲಿನ ಬಜೆಟ್ ನಲ್ಲಿ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ 10 ಸಾವಿರ ಕೋಟಿ ಮೀಸಲಿಡಬೇಕು.
• ಖಾಸಗಿ ವಲಯದಲ್ಲಿ ಮೀಸಲಾತಿ ಕಲ್ಪಿಸುವುದು.

ಮುಂತಾದ, ದಲಿತ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಈ ಸಮುದಾಯಗಳ ಸಾಂವಿಧಾನಿಕ ಹಕ್ಕು ರಕ್ಷಣೆ ಕಾಯಿದೆ ಮತ್ತು ಯೋಜನೆಗಳಿಗಾಗಿ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ದಿನಾಂಕ 10 ಡಿಸೆಂಬರ್ 2024ರಿಂದ ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ “ಚಲೋ ಬೆಳಗಾವಿ, ಅಂಬೇಡ್ಕರ್ ಜಾಥವನ್ನು- 2 ಹಮ್ಮಿಕೊಳ್ಳಲಾಗಿದೆ. ಸದರಿ ಜಾಥವು 10.12.2024 ರಂದು ಉಡುಪಿಯಿಂದ ಪ್ರಾರಂಭವಾಗಿ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುವ ಮೂಲಕ ದಿನಾಂಕ 12.12.2024 ಗುರುವಾರ ಚಿಕ್ಕಮಗಳೂರು ಜಿಲ್ಲೆಗೆ ಪ್ರವೇಶಿಸಲಿದ್ದು ಅಂದು ಮಧ್ಯಾಹ್ನ 12.30ಕ್ಕೆ ಸರಿಯಾಗಿ ಮೂಡಿಗೆರೆಯ ಲಯನ್ಸ್ ವೃತ್ತದಲ್ಲಿ ಸಮಾವೇಶ ನಡೆಯಲಿದೆ, ಹಾಗೂ ಅದೇ ದಿನ ಮಧ್ಯಾಹ್ನ 3.30ಕ್ಕೆ ಚಿಕ್ಕಮಗಳೂರು ನಗರದ ಎನ್.ಎಮ್.ಸಿ ವೃತ್ತದಿಂದ ಆಝಾದ್ ಪಾರ್ಕ್ ವರೆಗೆ ಕಾಲ್ನಡಿಗೆ ಜಾಥಾದ ಮೂಲಕ ತೆರಳಿ ಆಝಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶ ನಡೆಯಲಿದೆ. ಮುಂದೆ ಜಾಥವು ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ದಿನಾಂಕ 16.12.2024 ರಂದು ಬೆಳಗಾವಿಗೆ ತಲುಪುವುದು ಎಂದು ಪತ್ರಿಕಾಘೋಷ್ಠಿಯ ಮುಖಾಂತರ ವಿವರಿಸಿದರು.

ಜಿಲ್ಲಾ ಸಮಿತಿ ಸದಸ್ಯರಾದ ಗೌಸ್ ಮುನೀರ್ ರವರು ಮಾತನಾಡಿ ಜಾಥಕ್ಕೆ ರಾಜ್ಯದ ಜನತೆಯಲ್ಲಿ ಹಾಗೂ ವಿವಿಧ ಸಂಘಟನೆಗಳ ನಾಯಕರ ಬೆಂಬಲವನ್ನು ಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮುಬಾರಕ್, ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಖಾಲಿದ್, ಜಿಲ್ಲಾ ಸಮಿತಿ ಸದಸ್ಯರಾದ ಮೊಹಮ್ಮದ್ ಅಲಿ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಝ್ಮತ್ ಪಾಷ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ