gukesh

 

 

ಅತಿ ಕಿರಿಯ ವಯಸ್ಸಿನಲ್ಲೇ ಚೆಸ್‌ನಲ್ಲಿ ವಿಶ್ವ ಚಾಂಪಿಯನ್ ಆಗಿ ಡಿ.ಗುಕೇಶ್ ಅವರು ಹೊರಹೊಮ್ಮಿದ್ದು, ಇತಿಹಾಸ ನಿರ್ಮಿಸಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರು 5 ಕೋಟಿ ನಗದು ಬಹುಮಾನವನ್ನು ಘೋಷಣೆ ಮಾಡಿದ್ದಾರೆ.

ಗುಕೇಶ್ ಸಾಧನೆಯ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಸ್ಟಾಲಿನ್ ಅವರು, ಈ ಪ್ರಶಸ್ತಿಯು ಇಷ್ಟು ಚಿಕ್ಕ ವಯಸ್ಸಿನಲ್ಲಿ ಗುಕೇಶ್ ಅವರ ಅದ್ಭುತ ಸಾಧನೆಯನ್ನು ಪ್ರತಿಬಿಂಬಿಸುತ್ತದೆ. ತಮಿಳುನಾಡಿನ ಪ್ರತಿಭೆಯ ಗೆಲುವು ಜಾಗತಿಕ ಚೆಸ್ ಕಣದಲ್ಲಿ ಭಾರತದ ಹೆಮ್ಮೆಯ ಪರಂಪರೆಯನ್ನು ಮುಂದುವರಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಗುಕೇಶ್ ಅವರ ಸಾಧನೆಯನ್ನು ಗೌರವಿಸಲು, ನಾನು 5 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಲು ಸಂತೋಷಪಡುತ್ತೇನೆ. ಅವರ ಐತಿಹಾಸಿಕ ಗೆಲುವು ರಾಷ್ಟ್ರಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷ ತಂದಿದೆ. ಅವರು ಮುಂದೆಯೂ ಮಿಂಚಲಿ ಮತ್ತು ಭವಿಷ್ಯದಲ್ಲಿ ಎತ್ತರಕ್ಕೆ ಏರಲಿ ಎಂದು ಪೋಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ