18Muwigere1A (1)

 

 

ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಡಿ. 27 ಮತ್ತು 28ರಂದು ಕೃಷಿ ಮತ್ತು ತೋಟಗಾರಿಕೆ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎ.ಟಿ.ಕೃಷ್ಣಮೂರ್ತಿ ಹೇಳಿದರು.

ಅವರು ಬುಧವಾರ ಮೂಡಿಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ರವರು ವಹಿಸಲಿದ್ದಾರೆ. ಮೇಳದಲ್ಲಿ ವಿಶೇಷ ಆಕರ್ಷಣೆಯಾಗಿ ಕೃಷಿಯಲ್ಲಿ ಡ್ರೋನ್ ಬಳಕೆ, ಅಡಿಕೆ ಸಿಪ್ಪೆ ಗೊಬ್ಬರ ತಯಾರಿಕೆ, ವೈಜ್ಞಾನಿಕ ಮೀನು ಕೃಷಿ, ವಿದೇಶಿ ಹಣ್ಣಿನ ಬೆಳೆಗಳು, ಹವಾಮಾನ ಆಧಾರಿತ ಕೃಷಿ, ಅಧಿಕ ಇಳುವರಿಯ ಭತ್ತದ ತಳಿ, ಎರೆಹುಳು ಗೊಬ್ಬರ ತಯಾರಿಕೆ, ಕಾಳುಮೆಣಸು, ಮಾಧ್ಯಮಿಕ ಕೃಷಿ ಮತ್ತು ಭತ್ತದ ಸಾಂಪ್ರದಾಯಿಕ ತಳಿಗಳ ಪ್ರಾತ್ಯಕ್ಷಿಕೆ ಇರುತ್ತದೆ. ಅಲ್ಲದೇ ಏಲಕ್ಕಿ ಬೆಳೆಗಳ ತಾಯಿ ಕ್ಷೇತ್ರ, ರೈತ-ವಿಜ್ಞಾನಿಗಳ ವಿಚಾರ ವಿನಿಮಯ, ಪ್ರಗತಿಪರ ರೈತರಿಗೆ ಸನ್ಮಾನ, ವಿವಿಧ ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಕೃಷಿ ಪರಿಕರಗಳ ಸಂಸ್ಥೆಗಳಿಂದ ಬೀಜ, ಗೊಬ್ಬರ, ಸಸ್ಯ ಸಂರಕ್ಷಣೆ ಮತ್ತು ಕೃಷಿ ಯಂತ್ರೋಪಕರಣಗಳ ವಸ್ತು ಪ್ರದರ್ಶನ, ವಿವಿಧ ತಳಿಗಳ ಕೋಳಿ, ಕುರಿ ಮತ್ತು ಜಾನುವಾರುಗಳು, ಶ್ವಾನ ಪ್ರದರ್ಶನವನ್ನು ಆಯೋಜಿಸಲಾಗಿದೆ. ಹಾಗಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ವಿ.ಶ್ರೀನಿವಾಸ,ಮಾತನಾಡಿ, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಮಡಿಕೇರಿಯ ಪ್ರಾದೇಶಿಕ ಕಚೇರಿ, ಐ.ಸಿ.ಎ.ಆರ್-ಐ.ಐ.ಎಸ್.ಆರ್ ನ ನಿವೃತ್ತ ಪ್ರಧಾನ ವಿಜ್ಞಾನಿ ಡಾ.ಎಂ.ಎನ್.ವೇಣುಗೋಪಾಲ್, ಮುಖ್ಯಸ್ಥ ಡಾ.ಎಸ್.ಜೆ.ಅಂಕೇಗೌಡ, ಶಿವಮೊಗ್ಗದ ಅಡಿಕೆ ಸಂಶೋಧನಾ ಕೇಂದ್ರದ ಪ್ರಧಾನ ಸಂಶೋಧಕ ಡಾ.ನಾಗರಾಜಪ್ಪ ಅಡಿವಪ್ಪರ್, ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಎಂ.ಮಂಜುನಾಥ, ಮೂಡಿಗೆರೆಯ ವ.ಕೃ.ತೋ.ಸಂ.ಕೇಂದ್ರದ ಯೋಜನಾ ಮುಖ್ಯಸ್ಥ ಡಾ. ಎಂ.ವೈ.ಉಲ್ಲಾಸ, ತೋಟಗಾರಿಕೆ ಮಹಾವಿದ್ಯಾಲಯದ ಕೊಲ್ಲೋತ್ತರ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವೈ.ಕಾಂತರಾಜ್ ಅವರು ತಾಂತ್ರಿಕ ಹಾಗೂ ವಿವಿಧ ಬೆಳೆಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆಂದು ಹೇಳಿದರು.

ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಮಾತನಾಡಿ ; ಕೃಷಿ ಮತ್ತು ತೋಟಗಾರಿಕಾ ಮೇಳಗಳಿಗೆ ರೈತರು, ಯುವಕರು, ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಕೃಷಿಯಲ್ಲಿ ಆಗುತ್ತಿರುವ ತಾಂತ್ರಿಕ ಬದಲಾವಣೆಗಳನ್ನು ಅರಿಯಲು, ಹೊಸ ಹೊಸ ಕೃಷಿ ವಿಧಾನಗಳ ಪರಿಚಯ ಮಾಡಿಕೊಳ್ಳಲು ಕೃಷಿ ಮೇಳೆಗಳು ಸಹಾಯಕವಾಗುತ್ತವೆ. ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಗೋಷ್ಠಿಯಲ್ಲಿ, ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ಅಶೋಕ್‍ಕುಮಾರ್, ಕಾರ್ಯದರ್ಶಿ ಪಿ.ಕೆ. ನಾಗೇಶ್, ರೈತ ಉತ್ಪಾದಕರ ಸಂಘದ ಅಧ್ಯಕ್ಷ ಎಚ್.ಕೆ.ಪೂರ್ಣೇಶ್, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರಾಧಿಕ್ಷಕಿ ಡಾ. ಸಿ.ಕೆ.ಪ್ರಮಿಳ, ಕಡೇಮಡ್ಕಲ್ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಡಾ. ಎ.ವಿ.ಸ್ವಾಮಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ