ctr1

 

 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಘಟನೆ ರಾಜ್ಯದ ನಾಗರಿಕರಿಗೆ ಅತ್ಯಂತ ದುರದೃಷ್ಟಕರವಾದದ್ದು ಎಂದು ಪರಿಗಣಿಸಿದ ನ್ಯಾಯಾಲಯ, ಅಗತ್ಯವಿರುವಾಗ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಿದೆ.

ಪೊಲೀಸರು ಕಾನೂನು ಕ್ರಮ ಅನುಸರಿಸದೆ ಬಂಧಿಸಿರುವುದನ್ನು ಪ್ರಶ್ನಿಸಿ ಜಾಮೀನು ಅರ್ಜಿ ಸಲ್ಲಿಸಿದ್ದ ಸಿಟಿ ರವಿ ತಾನು ಬಿಡುಗಡೆಗೆ ಅರ್ಹ ಎಂದು ಹೇಳಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರನ್ನೊಳಗೊಂಡ ನ್ಯಾಯಪೀಠ ಮಧ್ಯಂತರ ಆದೇಶ ನೀಡಿತು.

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖಿಸಲಾಗಿತ್ತು. ಎಫ್ ಐಆರ್ ದಾಖಲಾದ ಬಳಿಕ ಸಿಟಿ ರವಿ ಅವರನ್ನು ಬಂಧಿಸಲಾಗಿತ್ತು.

ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಹಿಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದರು.

ಈ ಮಧ್ಯೆಯೇ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿತ್ತು. ಈ ಮಧ್ಯೆ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರನ್ನೊಳಗೊಂಡ ನ್ಯಾಯಪೀಠ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

ಸಿ.ಟಿ.ರವಿಯವರ ಬಿಡುಗಡೆಗೆ ಹೈಕೋರ್ಟ್ ಆದೇಶ ಮಾಡುತ್ತಿದ್ದಂತೆ ರಾಜ್ಯದಲ್ಲಿ ಅವರ ಬೆಂಬಲಿಗ ಬಿ.ಜೆ.ಪಿ. ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯವರ ಮನೆಯ ಸಮೀಪ ಜಮಾಯಿಸಿದ ಬಿ.ಜೆ.ಪಿ. ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ