September 12, 2026
;
ambulance

 

 

ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿಯವರಿಗೆ ಸ್ವಾಗತ ಕೋರಲು ಆಗಮಿಸಿದ್ದ 7 ಆಂಬುಲೆನ್ಸ್‌ಗಳ ಮೇಲೆ ಪ್ರಕರಣ ದಾಖಲಾಗಿದೆ. ಬಿ.ಎನ್.ಎಸ್. 177, 285 ಹಾಗೂ 292ರ ಅಡಿ ಪ್ರಕರಣ ದಾಖಲುಮಾಡಲಾಗಿದೆ.

ತಾಲ್ಲೂಕಿನ ಮಾಗಡಿ ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ ಆಂಬುಲೆನ್ಸ್‌ಗಳು ರೋಗಿಗಳು ಇಲ್ಲದೆ ಸೈರನ್, ಟಾಪ್ ಲೈಟ್ ಹಾಕಿದ್ದಕ್ಕೆ ಪ್ರಕರಣ ದಾಖಲಾಗಿದೆ. ಸೈರನ್ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಎಂದು ಪ್ರಕರಣ ದಾಖಲುಮಾಡಲಾಗಿದ್ದು, ನಗರ ಠಾಣೆಯಲ್ಲಿ 7 ಆಂಬುಲೆನ್ಸ್ ಗಳ ಮೇಲೆ ಎಫ್.ಐ.ಆರ್. ಆಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ನಗರದ ಬಂದ್ ಸೇರಿದಂತೆ ಹಲವು ಕಾರಣಕ್ಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್‌ಕೋಟ್ಯನ್ ಸೇರಿದಂತೆ 200ಕ್ಕೂ ಹೆಚ್ಚು ಜನರ ವಿರುದ್ಧ ನಗರಠಾಣೆ ಮತ್ತು ಬಸವನಹಳ್ಳಿ ಠಾಣೆಯಲ್ಲಿ 7 ಪ್ರಕರಣಗಳು ದಾಖಲಾಗಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;