mandya sammelana

 

 

ಮಂಡ್ಯದಲ್ಲಿ ನಡೆದ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಸಾಹಿತಿ ಗೊ.ರು. ಚನ್ನಬಸಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಮಂಡ್ಯದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿಯ ಡಿಂಡಿಮ ಮೊಳಗಿದೆ. ಮೊದಲ ದಿನ ಬರೋಬ್ಬರಿ 2 ಲಕ್ಷ ಜನ ಸೇರಿ ದಾಖಲೆ ಬರೆದಿದ್ದರೆ, ಎರಡು ಮತ್ತು ಮೂರನೇ ದಿನ ಕೂಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು.  ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಮುಂದಿನ ಸಮ್ಮೇಳನ ನಡೆಸಲು ಬಳ್ಳಾರಿ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ಪ್ರಬಲ ಪೈಪೋಟಿ ನಡೆದಿದ್ದು. ಆದರೆ ಅಂತಿಮವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.

ಬಹಿರಂಗ ಅಧಿವೇಶದಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ತೆಗೆದುಕೊಂಡ ನಿರ್ಣಾಯಗಳು ಹೀಗಿವೆ.

  • ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ- 2022 ಸಮಗ್ರ ಜಾರಿಗೆಗೆ ಒತ್ತಾಯ
  • ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು‌. ಖಾಲಿ ಇರುವ ಶಿಕ್ಚಕರ ಹುದ್ದೆ ಭರ್ತಿ ಮಾಡುವುದು.
  • ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಜೊತೆಗೆ ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್​ಗಳನ್ನು ಸರ್ಕಾರ ಎದುರಿಸಬೇಕು.
  • ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
  • ರಾಷ್ಟ್ರಕವಿ ಪ್ರಶಸ್ತಿಯನ್ನ ಘೋಷಿಸಿಬೇಕು.
  • 87ನೇ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿಗೆ ಸೇರಿ ಎಲ್ಲರಿಗೂ, ಗಣ್ಯರಿಗೆ ಅಭಿನಂದನೆಗೆ ಮಂಡನೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ