ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಹೊಂಡಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಜಾವಳಿ ಸಮೀಪ ಘಟನ ನಡೆದಿದೆ. ಪ್ರವಾಸಿಗರಿಂದ ಟಿ.ಟಿ ವಾಹನ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಾಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರಿದ್ದ ಟಿಟಿ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ.
ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾಸಿಲಾಗಿದೆ.
ಗಾಯಗೊಂಡವರನ್ನು ಮೇಲೆತ್ತಲು ಪೊಲೀಸರು ಮತ್ತು ಸ್ಥಳೀಯರು ಸಹಕರಿಸಿದ್ದಾರೆ.




