halase shivanna

 

 

ಕರ್ನಾಟಕ ಬೆಳೆಗಾರರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಹಿರಿಯ ಕಾಫಿ ಬೆಳೆಗಾರ, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನಿರ್ದೇಶಕ ಹೆಚ್.ಬಿ. ಶಿವಣ್ಣ ಹಳಸೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ಸಕಲೇಶಪುರದಲ್ಲಿ ನಡೆದ ಒಕ್ಕೂಟದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಹಳಸೆ ಶಿವಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಅಧ್ಯಕ್ಷರಾಗಿದ್ದ ಡಾ. ಹೆಚ್.ಟಿ. ಮೋಹನ್ ಕುಮಾರ್ ಅವರ ಅಧಿಕಾರ ಅವಧಿ ಪೂರ್ಣಗೊಂಡಿದ್ದು ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹಳಸೆ ಶಿವಣ್ಣ ಆಯ್ಕೆಯಾಗಿದ್ದಾರೆ.

ಕೇಂದ್ರ ಸಚಿವರರಾದ ಪಿಯೂಸ್ ಗೋಯನ್, ಹೆಚ್.ಡಿ. ಕುಮಾರಸ್ವಾಮಿ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ ಮುಂತಾದವರ ಸಮ್ಮುಖದಲ್ಲಿ ಹಳಸೆ ಶಿವಣ್ಣ ಅವರ ಹೆಸರನ್ನು ಘೋಷಣೆ ಮಾಡಿದ್ದು, ಸದಸ್ಯರು ಸರ್ವಾನುಮತದಿಂದ ಅವರ ಆಯ್ಕೆಗೆ ಅನುಮೋದನೆ ನೀಡಿದ್ದಾರೆ.

ಶಿವಣ್ಣ ಅವರು ಮೂಡಿಗೆರೆ ತಾಲ್ಲೂಕಿನ ಹಳಸೆ ಗ್ರಾಮದವರಾಗಿದ್ದು, ಜಿಲ್ಲೆಯ ಪ್ರಮುಖ ಕಾಫಿ ಬೆಳೆಗಾರರಾಗಿದ್ದಾರೆ. ಇವರ ತಂದೆ ದಿ. ಹಳಸೆ ಬೈರೇಗೌಡರು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಮಲೆನಾಡು ಭಾಗದಲ್ಲಿ ಜನಾನುರಾಗಿಯಾಗಿದ್ದರು.

ಹಳಸೆ ಶಿವಣ್ಣ ಅವರು ಪ್ರಮುಖವಾಗಿ ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದಾರೆ. ಮೂಡಿಗೆರೆ ಪಿಕಾರ್ಡ್ ಬ್ಯಾಂಕ್ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬ್ಯಾಂಕ್ ನ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದಾರೆ. ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದಾರೆ.

 

ರಾಜ್ಯದ ಕಾಫಿ ಬೆಳೆಯುವ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬೆಳೆಗಾರರ ಪ್ರಮುಖ ಸಂಘಟನೆಯಾಗಿರುವ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಸ್ಥಾಪಕ ಸದಸ್ಯರಾಗಿರುವ ಶಿವಣ್ಣ ಅವರು ಕಳೆದ ಅವಧಿಯಲ್ಲಿ ಒಕ್ಕೂಟದ ನಿರ್ದೇಶಕರಾಗಿದ್ದರು. ಇದೀಗ ಒಕ್ಕೂಟದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ; ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಅವಿರೋಧವಾಗಿ ಆಯ್ಕೆಮಾಡಿರುವುದು ನನ್ನ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸಿದೆ. ತನ್ನ ಅವಧಿಯಲ್ಲಿ ರಾಜ್ಯದ ಕಾಫಿ ಬೆಳೆಗಾರರ ಹಿತಾಸಕ್ತಿಗೆ ಪೂರಕವಾಗಿ ಒಟ್ಟಾರೆ ಕಾಫಿ ಉದ್ದಿಮೆಯ ಬೆಳವಣಿಗೆಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ