30Mudigere1A

 

 

ಭೀಮ ಕೋರೆಂಗಾವ್ ಆಚರಣ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜ.10ರಂದು 207ನೇ ಭೀಮಾ ಕೋರೆಂಗಾವ್ ವಿಜಯೋತ್ಸವವನ್ನು ಪಟ್ಟಣದ ಲಯನ್ಸ್ ವೃತ್ತದಲ್ಲಿ ಅದ್ದೂರಿಯಾಗಿ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಸುಂದ್ರೇಶ್ ಕನ್ನಾಪುರ ಹೇಳಿದರು.

ಅವರು ಸೋಮವಾರ ಮೂಡಿಗೆರೆ ಪತ್ರಿಕಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 2 ವರ್ಷದಿಂದ ಸಂಘದ ವತಿಯಿಂದ ಭೀಮ ಕೋರೆಂಗಾವ್ ವಿಜಯೋತ್ಸವ ಆಚರಿಸಿಕೊಂಡು ಬರಲಾಗಿದ್ದು, ಈ ಬಾರಿ ನಡೆಯುವ ವಿಜಯೋತ್ಸವಕ್ಕೆ ಕಳೆದ 2 ತಿಂಗಳಿಂದ ಸಂಘದ ಸದಸ್ಯರು ಹಳ್ಳಿ ಹಳ್ಳಿಗೆ ತೆರಳಿ ಪ್ರಚಾರ ನಡೆಸಲಾಗಿದೆ. ಜನರಿಂದ ಉತ್ತಮ ಬೆಂಬಲ ಹಾಗೂ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪಟ್ಟಣದಲ್ಲಿ ಜ.3ರಂದು ಇನ್ನೊಂದು ಸಂಘಟನೆಯಿಂದ ಪ್ರಥಮ ಬಾರಿ ಭೀಮ ಕೋರೆಂಗಾವ್ ವಿಜಯೋತ್ಸವ ನಡೆಸಲು ತಯಾರಿ ನಡೆದಿದೆ. ಅದಕ್ಕೆ ನಮ್ಮ ಸದಸ್ಯರು ಭಾಗವಹಿಸಲಿದ್ದೇವೆ. ನಮ್ಮ ಕಾರ್ಯಕ್ರಮಕ್ಕೆ ಕೂಡ ಅವರನ್ನು ಆಹ್ವಾನಿಸಿದ್ದೇವೆ. ನಮ್ಮ ಸಂಘದಲ್ಲಿ ರಾಜಕೀಯ ನುಸುಳದಂತೆ ಸಂಘಟಿಸಿ, ಎಲ್ಲಾ ಪಕ್ಷದ ಹಿರಿಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರಿಗೆ ಆಹ್ವಾನ ನೀಡುವ ಮೂಲಕ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲು ಸಿದ್ಧತೆ ನಡೆದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು ಮಾತನಾಡಿ, ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ದುನಿಯಾ ವಿಜಯ್, ಖ್ಯಾತ ಬರಹಗಾರ ಡಾ.ವಿಠ್ಠಲ್‍ವಗ್ಗನ್, ಮಹಾರಾಷ್ಟ್ರದ ಸಿದ್ಧನಾಯಕರವರ ಮರಿ ಮೊಮ್ಮಗ ಮಿಲಿಂದ್ ಇನಂದಾರ್ ಸರಕಾರ್ ಆಗಮಿಸಲಿದ್ದಾರೆ. ಮೆರವಣಿಗೆಯಲ್ಲಿ ಡಿಜೆ, ನಾಸಿಕ್ ಡೋಲ್, ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದ್ದು, ಕಳೆದ ಬಾರಿಗಿಂತಲೂ ವಿಭಿನ್ನ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಬೇಕೆಂದು ಮನವಿ ಮಾಡಿದರು.

ಉಪಾಧ್ಯಕ್ಷ ಹರೀಶ್ ಕೆಲ್ಲೂರು, ಸಲಹ ಸಮಿತಿ ಅಧ್ಯಕ್ಷ ಬಿನ್ನಡಿ ಪ್ರಭಾಕರ್, ಸಲಹೆಗಾರ ರಮೇಶ್ ಕೆಳಗೂರು, ಭಾನುಪ್ರಕಾಶ್, ಜಗದೀಶ್ ಕಾರ್ಬೈಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ