30Mudigere3A

 

 

ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸುವ ಮನೋಭಾವ ಮೂಡಿಸುವುದರಿಂದ ಶಿಕ್ಷಣದ ಬಗ್ಗೆ ಒಲುವು ಹೆಚ್ಚಾಗುವ ಜತೆಗೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಸಾಧ್ಯವಾಗುತ್ತದೆ ಎಂದು ಮೂಡಿಗೆರೆ ತಹಸೀಲ್ದಾರ್ ರಾಜಶೇಖರ್ ಮೂರ್ತಿ ಹೇಳಿದರು.

ಅವರು ಭಾನುವಾರ ಮೂಡಿಗೆರೆ ಪಟ್ಟಣದ ತಾ.ಪಂ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ್ ಸಭಾಂಗಣದಲ್ಲಿ ಗಿರಿದರ್ಶಿನಿ ಹಾಸ್ಟೇಲ್ ಕಾಲೇಜು ವಿದ್ಯಾರ್ಥಿ ಬಳಗದ ವತಿಯಿಂದ ವಿಶ್ವ ಮಾನವ ದಿನಾಚರಣೆಯ ಪ್ರಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು. ರಾಷ್ಟ್ರಕವಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವ ಮಾನವ ಸಂದೇಶ. ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ, ಬಸವಣ್ಣರಂತಹ ಮಾನ್ ವ್ಯಕ್ತಿಗಳ ದೃಷ್ಟಿಕೋನ ಹಾಗೂ ಶಿಕ್ಷಣದ ಶಕ್ತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ವಿಶ್ವ ಮಾನವರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುವೆಂಪು ಹೇಳಿದಂತೆ ಪ್ರತಿಯೊಂದು ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತಾನೆ. ಈ ಸಮಾಜದಲ್ಲಿ ಬೆಳೆಯುವಾಗ ಅಲ್ಪ ಮಾನವನನ್ನಾಗಿ ಮಾಡುತ್ತದೆ. ಅದಕ್ಕೆ ವಿದ್ಯೆಯೆಂಬ ಅಸ್ತ್ರ ಬಳಸಿದಾಗ ಮಾತ್ರ ಪುನಃ ವಿಶ್ವ ಮಾನವನಾಗಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಎಚ್.ಕೆ.ಸಮರ್ಥ್ ವಹಿಸಿದ್ದರು. ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜಿ.ಪಂ. ಮಾಜಿ ಸದಸ್ಯ ಎಂ.ಎಸ್.ಅನಂತ್, ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ, ಸಂಪನ್ಮೂಲ ವ್ಯಕ್ತಿ ಎಚ್.ನೌಷದ್, ಉಪನ್ಯಾಸಕಿ ಎಂ.ಬಿ.ಸಾವಿತ್ರಮ್ಮ, ನಿಲಯ ಪಾಲಕ ಅರ್.ಪ್ರಸಾದ್, ಎನ್.ಕೆಂಚಯ್ಯ, ಅನುಷಾ, ದೀಪು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ