yasasvini1

 

 

ರಾಜ್ಯ ಸರ್ಕಾರ ಸಹಕಾರಿ ಸಂಘಗಳ ಮೂಲಕ ಜಾರಿಗೆ ತರುತ್ತಿರುವ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಗೆ 2024-25ನೇ ಸಾಲಿಗೆ ಹೆಸರು ನೋಂದಾಯಿಸಿಕೊಳ್ಳಲು 2025 ರ ಜನವರಿ 31 ಕೊನೆಯ ದಿನಾಂಕವಾಗಿದೆ.

ರಾಜ್ಯದಲ್ಲಿ ಯಾವುದೇ ಸಹಕಾರಿ ಸಂಸ್ಥೆಗಳ ಸದಸ್ಯರಾದವರ ಮತ್ತು ಸಹಕಾರಿ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ ಸದಸ್ಯರಾದವರ ಕುಟುಂಬದವರಿಗೆ ಈ ಯೋಜನೆ ಅನ್ವಯವಾಗುತ್ತದೆ.

ಗ್ರಾಮೀಣ ಪ್ರದೇಶದ 4 ಜನರ ಕುಟುಂಬಕ್ಕೆ ರೂ. 500-00 ಹಾಗೂ ನಗರ ಪ್ರದೇಶದ 4 ಜನರ ಕುಟುಂಬಕ್ಕೆ ರೂ. 1000-00 ಹಣ ಪಾವತಿಸಿ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು. ಕುಟುಂಬದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರಿದ್ದರೆ ಗ್ರಾಮೀಣ ಭಾಗದಲ್ಲಿ ತಲಾ ಒಬ್ಬರಿಗೆ ರೂ. 100 ಹಾಗೂ ನಗರ ಪ್ರದೇಶದಲ್ಲಿ ರೂ. 200 ಹೆಚ್ಚುವರಿ ಶುಲ್ಕ ಪಾವತಿಸಬೇಕು.

ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ತಾವು ಸದಸ್ಯರಾಗಿರುವ ಸಹಕಾರ ಸಂಘಗಳನ್ನು ನೇರವಾಗಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದು ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ. ಇದುವರೆಗೂ ಹೆಸರು ನೊಂದಾಯಿಸಿಕೊಳ್ಳದವರು ಜನವರಿ 31ರ ಒಳಗಾಗಿ ಹೆಸರು ನೊಂದಾಯಿಸಿಕೊಳ್ಳಲು ಅವಕಾಶವಿದೆ.

ತುರ್ತು ಆರೋಗ್ಯ ಸಮಸ್ಯೆಯಾದಾಗ ಈ ಯೋಜನೆ ಬಹಳ ಅನುಕೂಲಕರವಾಗಿದ್ದು, ಕುಟುಂಬಕ್ಕೆ ರೂ. 5 ಲಕ್ಷದ ವರೆಗೆ ಆರೋಗ್ಯ ರಕ್ಷಾ ವಿಮೆ ಸೌಲಭ್ಯವಿರುತ್ತದೆ.

2024-25 ರ ಚಿಕಿತ್ಸಾ ಅವಧಿಯನ್ನು 01-04-2025 ರಿಂದ 31-03-2026ರ ವರೆಗೆ ನಿಗದಿಗೊಳಿಸಲಾಗಿದೆ.

ಹೆಸರು ನೊಂದಾಯಿಸಲು ನಿಗದಿತ ನೋಂದಣಿ ಶುಲ್ಕದೊಂದಿಗೆ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ ಮತ್ತು 2 ಪಾಸ್ ಪೋರ್ಟ್ ಅಳತೆಯ ಪೋಟೋ ನೀಡಬೇಕಾಗುತ್ತದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ