bsp

 

 

ಮೂಡಿಗೆರೆ ಪಟ್ಟಣದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ನಿರ್ಮಿಸುವುದಕ್ಕಾಗಿ ಜಾಗ ಗುರುತಿಸಿ ಕೊಡಬೇಕು ಎಂದು ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡ ಹಿತರಕ್ಷಣಾ ಒಕ್ಕೂಟದ ವತಿಯಿಂದ ಪಟ್ಟಣ ಪಂಚಾಯಿತಿಗೆ ಹಾಗೂ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮೂಡಿಗೆರೆ ಪಟ್ಟಣದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಬಹುತೇಕ ರಾಜ್ಯೆ ಎಲ್ಲಾ ತಾಲ್ಲೂಕು  ಕೇಂದ್ರಗಳಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲಾಗಿದೆ. ಹಾಗೆಯೇ ಮೂಡಿಗೆರೆಯಲ್ಲಿಯೂ ಕಾನೂನು ರೀತಿಯಲ್ಲಿ ಪುತ್ತಳಿಯನ್ನು ನಿರ್ಮಿಸಲು ಜಾಗವನ್ನು ನೀಡಬೇಕು ಎಂದು ಮನವಿಯನ್ನು ಕೊಡಲಾಯಿತು.

ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷದ ಮತ್ತು ಸಂಘ ಸಂಸ್ಥೆಗಳ ಮುಖಂಡರುಗಳು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಸಂಘ ಸಂಸ್ಥೆಗಳ ಹಾಗು ಸಮಾನ ಮನಸ್ಕರ ಸಭೆ ಕರೆದು ಪುತ್ಥಳಿ ನಿರ್ಮಿಸಲು ಸೂಕ್ತ ಸ್ಥಳ ನೀಡಲು ಚರ್ಚೆ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ದೇಜಪ್ಪ ಹೊಯ್ಸಳಲು, ಮೂಡಿಗೆರೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಹೊಸಕೆರೆ, ಭೀಮಾ ಕೋರೆಂಗಾವ್ ಸಮಿತಿ ಅಧ್ಯಕ್ಷ ಸಿದ್ದೇಶ್ ಕೆಸವಳಲು, ಮುಖಂಡರುಗಳಾದ ರಮೇಶ್ ಲೋಕವಳ್ಳಿ, ಶಂಕರ್ ಬೆಟ್ಟಗೆರೆ, ಸುಧೀರ್ ಚಕ್ರಮಣಿ, ಮುಂತಾದವರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ