raitha alduru

 

 

ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಹೋಬಳಿಯ ಹುಕ್ಕುಂದ ಗ್ರಾಮದಲ್ಲಿ ಕಾಡಾನೆಯೊಂದು ರೈತನ ಮೇಲೆ ದಾಳಿ ಮಾಡಿದೆ. ಹೆಡದಾಳು ಹುಕ್ಕುಂದ ಗ್ರಾಮದ ರೈತ ನಾರಾಯಣ ಗೌಡ ಎಂಬುವವರು ಕಾಫಿಯನ್ನು ರಕ್ಷಣೆ ಮಾಡಿಕೊಳ್ಳಲು ಕಣದಲ್ಲಿ ಮಲಗಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ಮಲಗಿದವರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದೆ.

ನಾರಾಯಣಗೌಡ ಅವರು ಪಕ್ಕದಲ್ಲಿಯೇ ಇದ್ದ ಹುಲ್ಲಿನ ಮೇಲೆ ಬಿದ್ದಿದ್ದರಿಂದ ತೀವ್ರ ಅಪಾಯದಿಂದ ಪಾರಾಗಿದ್ದಾರೆ ಆದರೆ ಅವರಿಗೆ ತಲೆ ಮತ್ತು ಕಾಲುಗಳಿಗೆ ಪೆಟ್ಟು ಬಿದ್ದಿದೆ. ತಕ್ಷಣ ಊರಿನವರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ ಕೂಡಲೇ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ನಾರಾಯಣ ಗೌಡರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ

ಆಲ್ದೂರು ಹೋಬಳಿ ಹಳಿಯೂರು ,ಹುಕ್ಕುಂದ, ಬನ್ನೂರು, ಹೊಲದ ಬೈಲ್ ಗ್ರಾಮದಲ್ಲಿ ಒಂಟಿ‌ಸಲಗ  ಸಂಚಾರ ಮಾಡುತ್ತಿದ್ದು ಈ ಭಾಗದ ಗ್ರಾಮಸ್ಥರು, ಕಾರ್ಮಿಕರು ಎಚ್ಚರಿಕವಹಿಸಬೇಕು, ಆನೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಭಾಗದಲ್ಲಿ ಆನೆಗಳ ನಿರಂತರ ಉಪಟಳದಿಂದ ರೈತರು ಮತ್ತು ಕಾರ್ಮಿಕರು ಇಕ್ಕಟ್ಟಿನ ಪರಿಸ್ಥಿತಿಗೆ ತಲುಪಿದ್ದಾರೆ. ಈಗ ತೋಟದಲ್ಲಿ ಕಾಫಿ, ಮೆಣಸು ಕೊಯ್ಲಿನ ಸಮಯವಾಗಿದ್ದು, ಕಾಡಾನೆ ಭಯದಿಂದ ಕಾರ್ಮಿಕರು ತೋಟಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈಗ್ಗೆ ಕೆಲ ತಿಂಗಳ ಹಿಂದೆ ಆಲ್ದೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಕಾಡಾನೆ ತುಳಿದು ಸಾಯಿಸಿತ್ತು. ಅರಣ್ಯ ಇಲಾಖೆಯವರು ಇಲ್ಲಿ ಸಂಚರಿಸುತ್ತಿರುವ ಕಾಡಾನೆಯನ್ನು ಹಿಡಿದು ಬೇರೆಡೆಗೆ ಸಾಗಿಸುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ