IMG-20250112-WA0290

 

 

ಮಾನವರು ವಿಶಾಲ ಮನೋಭಾವನೆ ಬೆಳೆಸಿಕೊಳ್ಳಬೇಕು, ಕುವೆಂಪು ಅವರು ಸಾರಿದ ವಿಶ್ವಮಾನವ ಸಂದೇಶವನ್ನು ತನ್ನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು  ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ  ಶ್ರೀ ಗುಣನಾಥ ಸ್ವಾಮೀಜಿ ಕರೆ ನೀಡಿದರು.
ಅವರು ಮೂಡಿಗೆರೆ ತಾಲ್ಲೂಕಿನ ಜಾವಳಿ ಬಿ.ಜಿ.ಎಸ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟನೆ ಮಾಡಿ ಮಾತನಾಡಿದರು.
ಮನುಷ್ಯನಾಗಿ ಹುಟ್ಟಿದ ಮೇಲೆ ನಾವು ವಿಶ್ವಮಾನವನಾಗಿ ಬದುಕಬೇಕೆ ಹೊರತು ಸಂಕುಚಿತ ವ್ಯಕ್ತಿಯಾಗಿ ಅಲ್ಲ. ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತ ಕಟ್ಟುವ ಯುವ ಮನಸ್ಸುಗಳು.   ಭಾರತ ದೇಶವನ್ನು ಪ್ರಪಂಚದ ಎಲ್ಲಾ ದೇಶಗಳಿಗಿಂತ ಮುಂದುವರಿದ ದೇಶವಾಗಿಸಲು ವಿದ್ಯಾರ್ಥಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದರು.
ಜಾವಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ಮಾತನಾಡಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬಿಜಿಎಸ್ ಶಿಕ್ಷಣ ಸಂಸ್ಥೆ ಉತ್ತಮ ಶಿಕ್ಷಣವನ್ನು ಒದಗಿಸುತ್ತಿದೆ . ಎಲ್ಲಾ ಹಳ್ಳಿಗಳಲ್ಲಿಯೂ ಇಂತಹ ಸಂಸ್ಥೆಗಳು ಬೆಳೆದರೆ ಕರ್ನಾಟಕವು ಶಿಕ್ಷಣದಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ ಎಂದರು.
ಶಿಕ್ಷಣ ಇಲಾಖೆಯ ಹೇಮಂತ್ ಚಂದ್ರ ಮಾತನಾಡಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ನಾಲ್ನುಡಿಯಂತೆ ಮಕ್ಕಳು ಶಾಲೆಯಲ್ಲಿ ಅಧ್ಯಾಪಕರಿಗೆ ಮನೆಯಲ್ಲಿ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು ಈ ಆಧುನಿಕ ಯುಗದಲ್ಲಿ ಮಕ್ಕಳು ಮೊಬೈಲ್ ಟಿವಿ ಗಳಿಂದ ದೂರ ಇದ್ದರೆ ಒಳ್ಳೆಯದು ಇದರ ಬಗ್ಗೆ ಪೋಷಕರು ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.
ಆಡಳಿತ ಮಂಡಳಿ ಸದಸ್ಯರಾದ ಚೆನ್ನಕೇಶವ ಗೌಡ,ಎಂ.ವಿ ಜಗದೀಶ್, ಪರೀಕ್ಷಿತ್ ಜಾವಳಿ, ಜೆ.ಜಿ. ಶಶಿಧರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮನೋಹರ್, ವಾಟೇಖಾನ್ ಶ್ರೀನಾಥ್, ಕಾಫಿ ಬೆಳೆಗಾರರ ಗಿಲ್ಬರ್ಟ್ ಲೋಬೊ, ಕೇಶವೆಗೌಡ, ಮುಖ್ಯೋಪಾಧ್ಯಾಯರಾದ ಸುರೇಶ್, ಉಪನ್ಯಾಸಕ ದುಗ್ಗಪ್ಪ ಗೌಡ ಶಿಕ್ಷಣ ತಜ್ಞರು,ಶಿಕ್ಷಕರಾದ ಯೋಗೇಶ್,ಗೌರಿಬಾಯಿ, ಸತೀಶ್, ಸಾಗರ್, ಆಶಾಕಿರಣ್. ಅನ್ನಪೂರ್ಣ ಪೋಷಕರು ಹಾಗೂ ಗ್ರಾಮಸ್ಥರು ಮತ್ತು ಮಕ್ಕಳು ಹಾಜರಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ